IPL 2024: RCB ವಿರುದ್ಧ ಗುಜರಾತ್ ಟೈಟಾನ್ಸ್ 147 ರನ್‌ಗಳಿಗೆ ಆಲೌಟ್! ಹ್ಯಾಟ್ರಿಕ್ ವಿಕೆಟ್ ಸಾಧನೆ!

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 148 ರನ್ ಗಳ ಗುರಿ ನೀಡಿದೆ.
ಆರ್ ಸಿಬಿ ತಂಡ
ಆರ್ ಸಿಬಿ ತಂಡ

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 148 ರನ್ ಗಳ ಗುರಿ ನೀಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ RCB ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು.

ಗುಜರಾತ್ ಪರ ಶಾರುಖ್ ಖಾನ್ 24 ಎಸೆತಗಳಲ್ಲಿ 37 ರನ್, ರಾಹುಲ್ ತೆವಾಟಿಯಾ 21 ಎಸೆತಗಳಲ್ಲಿ 35 ರನ್ ಗಳಿಸಿದರೆ, ಡೇವಿಡ್ ಮಿಲ್ನರ್ 20 ಎಸೆತಗಳಲ್ಲಿ 30 ರನ್ ಗಳಿಸಿದರು. ಇದರಿಂದಾಗಿ ಗುಜರಾತ್ 19.3 ಓವರ್‌ಗಳಲ್ಲಿ 147 ರನ್ ಗಳಿಸಿತು. ಸಾಯಿ ಸುದರ್ಶನ್ ಬದಲಿಗೆ ವಿಜಯ್ ಶಂಕರ್ ಪ್ರಭಾವಿ ಆಟಗಾರನಾಗಿ ಬಂದರು, ಆದರೆ ನಿರೀಕ್ಷಿತ ಆಟ ಪ್ರದರ್ಶನ ಸಾಧ್ಯವಾಗಲಿಲ್ಲ.

ಆರ್ ಸಿಬಿ ತಂಡ
IPL 2024: 12 ವರ್ಷಗಳ ನಂತರ ವಾಂಖೆಡೆಯಲ್ಲಿ ಮುಂಬೈ ವಿರುದ್ಧ ಕೆಕೆಆರ್ ಗೆ ಗೆಲುವು

ಆರ್‌ಸಿಬಿ ಪರ ಮೊಹಮ್ಮದ್ ಸಿರಾಜ್, ಯಶ್ ದಯಾಳ್ ಮತ್ತು ವಿಜಕುಮಾರ್ ವಿಶಾಕ್ 2-2 ವಿಕೆಟ್ ಪಡೆದರೆ, ಕ್ಯಾಮರೂನ್ ಗ್ರೀನ್ ಮತ್ತು ಕರ್ಣ್ ಶರ್ಮಾ 1-1 ವಿಕೆಟ್ ಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com