IPL 2024: ಗುಜರಾತ್ ವಿರುದ್ಧ ಸ್ಫೋಟಕ ಬ್ಯಾಟಿಂಗ್, ಐಪಿಎಲ್ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ Virat Kohli

ಹಾಲಿ ಐಪಿಎಲ್ ಟೂರ್ನಿಯಲ್ಲಿ ಆರ್ ಸಿಬಿಯ ರನ್ ಮೆಷಿನ್ ವಿರಾಟ್ ಕೊಹ್ಲಿ ದಾಖಲೆಗಳ ಸರಣಿ ಮುಂದುವರೆದಿದ್ದು, ನಿನ್ನೆ ನಡೆದ ಗುಜರಾತ್ ವಿರುದ್ಧದ ಪಂದ್ಯದಲ್ಲೂ ಕೊಹ್ಲಿ ಐಪಿಎಲ್ ಇತಿಹಾಸದ ಅಪರೂಪದ ದಾಖಲೆ ಬರೆದಿದ್ದಾರೆ.
ವಿರಾಟ್ ಕೊಹ್ಲಿ ದಾಖಲೆ
ವಿರಾಟ್ ಕೊಹ್ಲಿ ದಾಖಲೆ

ಬೆಂಗಳೂರು: ಹಾಲಿ ಐಪಿಎಲ್ ಟೂರ್ನಿಯಲ್ಲಿ ಆರ್ ಸಿಬಿಯ ರನ್ ಮೆಷಿನ್ ವಿರಾಟ್ ಕೊಹ್ಲಿ ದಾಖಲೆಗಳ ಸರಣಿ ಮುಂದುವರೆದಿದ್ದು, ನಿನ್ನೆ ನಡೆದ ಗುಜರಾತ್ ವಿರುದ್ಧದ ಪಂದ್ಯದಲ್ಲೂ ಕೊಹ್ಲಿ ಐಪಿಎಲ್ ಇತಿಹಾಸದ ಅಪರೂಪದ ದಾಖಲೆ ಬರೆದಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 52ನೇ ಪಂದ್ಯದಲ್ಲಿ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿ ವಿರಾಟ್ ಕೊಹ್ಲಿ ಈ ವಿಶೇಷ ದಾಖಲೆ ಬರೆದಿದ್ದು, ಈ ಮೂಲಕ ವೆಸ್ಟ್ ಇಂಡೀಸ್​ನ ದೈತ್ಯ ಕ್ರಿಸ್ ಗೇಲ್, ಕೀರನ್ ಪೊಲಾರ್ಡ್ ಹಾಗೂ ಪಾಕಿಸ್ತಾನದ ಶೊಯೆಬ್ ಮಲಿಕ್ ಬಳಿಕ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ದಾಖಲೆ
IPL 2024: Virat Kohli ಮಾಡಿದ ರನೌಟ್​ ಕಂಡು ಆಶ್ಚರ್ಯ ಚಕಿತರಾದ Anushka Sharma

ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 27 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 42 ರನ್ ಬಾರಿಸಿದ್ದರು. ಈ 42 ರನ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ 12500+ ರನ್ ಕಲೆಹಾಕಿದ ಮೊದಲ ಭಾರತೀಯ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡರು. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎಂಬ ಹಿರಿಮೆಗೂ ಪಾತ್ರರಾದರು.

ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ಕೊಹ್ಲಿ 27 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 2 ಬೌಂಡರಿ​ಗಳೊಂದಿಗೆ 42 ರನ್ ಬಾರಿಸಿದ್ದರು.

ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ದಾಂಡಿಗ ಕ್ರಿಸ್ ಗೇಲ್ (14562 ರನ್ಸ್​), ಪಾಕಿಸ್ತಾನದ ಶೊಯೆಬ್ ಮಲಿಕ್ (13360), ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್ (12900) ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ನಾಲ್ಕನೇ ಬ್ಯಾಟರ್ ಆಗಿ ಕಿಂಗ್ ಕೊಹ್ಲಿ ಎಂಟ್ರಿ ಕೊಟ್ಟಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 370 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 9355 ಎಸೆತಗಳನ್ನು ಎದುರಿಸಿ 12536 ರನ್ ಕಲೆಹಾಕಿದ್ದಾರೆ. ಈ ವೇಳೆ 9 ಶತಕ ಹಾಗೂ 95 ಅರ್ಧಶತಕಗಳನ್ನು ಕೂಡ ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ಕಿಂಗ್​​ ಕೊಹ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಐಪಿಎಲ್ ನಲ್ಲಿ ಗರಿಷ್ಠ ರನ್

ಇನ್ನು ಈ 42 ರನ್​ಗಳೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ವಿರಾಟ್ ಕೊಹ್ಲಿ ಮೊದಲ ಸ್ಥಾನಕ್ಕೇರಿದ್ದು,11 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಕೊಹ್ಲಿ ಒಟ್ಟು 542 ರನ್ ಬಾರಿಸಿ ಅಗ್ರಸ್ಥಾನದಲ್ಲಿದ್ದರೆ, 10 ಇನಿಂಗ್ಸ್​ಗಳಲ್ಲಿ 509 ರನ್ ಕಲೆಹಾಕಿರುವ ರುತುರಾಜ್ ಗಾಯಕ್ವಾಡ್ ದ್ವಿತೀಯ ಸ್ಥಾನದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com