ಮಹಿಳೆಯರ T20 WC: ಅಕ್ಟೋಬರ್ 4ಕ್ಕೆ ಭಾರತ-ಕಿವೀಸ್ ಪಂದ್ಯ, 6ಕ್ಕೆ ಪಾಕ್ ವಿರುದ್ಧ ಹಣಾಹಣಿ!

2024ರ ಮಹಿಳಾ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಅಕ್ಟೋಬರ್ 4 ರಂದು ಸಿಲ್ಹೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದೊಂದಿಗೆ ಭಾರತದ ಅಭಿಯಾನ ಪ್ರಾರಂಭವಾಗಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ(ಐಸಿಸಿ) ತಿಳಿಸಿದೆ. ಭಾನುವಾರ ಪಂದ್ಯಾವಳಿಯ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಢಾಕಾ: 2024ರ ಮಹಿಳಾ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಅಕ್ಟೋಬರ್ 4 ರಂದು ಸಿಲ್ಹೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದೊಂದಿಗೆ ಭಾರತದ ಅಭಿಯಾನ ಪ್ರಾರಂಭವಾಗಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ(ಐಸಿಸಿ) ತಿಳಿಸಿದೆ. ಭಾನುವಾರ ಪಂದ್ಯಾವಳಿಯ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ.

ಪಾಕಿಸ್ತಾನದ ವಿರುದ್ಧ ಭಾರತದ ಬಹು ನಿರೀಕ್ಷಿತ ಪಂದ್ಯ ಅಕ್ಟೋಬರ್ 6 ರಂದು ಸಿಲ್ಹೆಟ್‌ನಲ್ಲಿ ನಡೆಯಲಿದೆ. ಎ ಗುಂಪಿನಲ್ಲಿ ಆರು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ, ಭಾರತ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಕ್ವಾಲಿಫೈಯರ್ 1 ತಂಡಗಳು ಒಳಗೊಂಡಿದ್ದು, ಈ ಪಂದ್ಯಗಳು ಸಿಲ್ಹೆಟ್‌ನಲ್ಲಿ ನಡೆಯಲಿವೆ. ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಅಕ್ಟೋಬರ್ 4ರಂದು ಸಿಲ್ಹೆಟ್‌ನಲ್ಲಿ ಕ್ವಾಲಿಫೈಯರ್ 1ರ ವಿರುದ್ಧ ತಮ್ಮ ಅಭಿಯಾನ ಆರಂಭಿಸಲಿದೆ.

ಸಾಂದರ್ಭಿಕ ಚಿತ್ರ
T20 World Cup: ಭಾರತದ ಬತ್ತಳಿಕೆಯಲ್ಲಿನ 15 ಅಸ್ತ್ರಗಳು!

"ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದಲ್ಲಿ ನಡೆಯಲಿರುವ ICC ಮಹಿಳಾ T20 ವಿಶ್ವಕಪ್‌ನಲ್ಲಿ ಸ್ಪರ್ಧಿಸುವ ನಿರೀಕ್ಷೆಯಲ್ಲಿ ಥ್ರೀಲ್ ಆಗಿದೆ. ಕಳೆದ ಕೆಲವು ವರ್ಷಗಳಿಂದ ಮಹಿಳಾ ಕ್ರಿಕೆಟ್‌ನ ಬೆಳವಣಿಗೆ ಮತ್ತು ವಿಶೇಷವಾಗಿ ಮಹಿಳಾ ವಿಶ್ವಕಪ್‌ ನಂಬಲಾಗದಂತಿವೆ. ಈ ಟೂರ್ನಿ ಸ್ಪರ್ಧಾತ್ಮಕ ಮತ್ತು ಹೆಚ್ಚಿನ ಕ್ರಿಕೆಟ್ ಶಕ್ತಿಯೊಂದಿಗೆ ವಿಶ್ವವನ್ನು ರಂಜಿಸಲಿದೆ ಎಂದು ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಐಸಿಸಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಿ ಗುಂಪಿನಲ್ಲಿ ಆತಿಥೇಯ ಬಾಂಗ್ಲಾದೇಶ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಕ್ವಾಲಿಫೈಯರ್ 2 ತಂಡಗಳು ಢಾಕಾದಲ್ಲಿ ಸೆಣಸಾಡಲಿವೆ. ಗ್ರೂಪ್ ಎ ಮತ್ತು ಗ್ರೂಪ್ ಬಿ ನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ. ಅಕ್ಟೋಬರ್ 17ರಂದು ಸಿಲ್ಹೆಟ್‌ನಲ್ಲಿ ಮತ್ತು ಅಕ್ಟೋಬರ್ 18ರಂದು ಢಾಕಾದಲ್ಲಿ ಸೆಮಿಫೈನಲ್ ಪಂದ್ಯಗಳು ನಿಗದಿಪಡಿಸಲಾಗಿದೆ. ಅಕ್ಟೋಬರ್ 20ರಂದು ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ 2024ರ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟಕ್ಕೆ ಪೈಪೋಟಿ ನಡೆಯಲಿದೆ.

ಇದಕ್ಕೂ ಮುನ್ನಾ ಯುಎಇನ ಅಬುಧಾಬಿಯಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅರ್ಹತಾ ಸುತ್ತಿನಿಂದ ಕ್ವಾಲಿಫೈಯರ್ 1 ಮತ್ತು ಕ್ವಾಲಿಫೈಯರ್ 2 ತಂಡಗಳು ಹೊರಹೊಮ್ಮಲಿವೆ. ಮೇ 7ರಂದು ಫೈನಲ್ ಪಂದ್ಯ ನಡೆಯಲಿದೆ. 2024ರ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್ 27ರಿಂದ ಅಕ್ಟೋಬರ್ 1ರವರೆಗೆ 10 ಅಭ್ಯಾಸ ಪಂದ್ಯಗಳು ಢಾಕಾದ BKSP ನಲ್ಲಿ ನಡೆಯಲಿವೆ. 2024 ರ ಮಹಿಳಾ T20 ವಿಶ್ವಕಪ್ ಬಾಂಗ್ಲಾದೇಶದಲ್ಲಿ ಅಕ್ಟೋಬರ್ 3-20 ರವರೆಗೆ ನಡೆಯಲಿದೆ, ಇದು 2014 ರ ನಂತರ ಎರಡನೇ ಬಾರಿಗೆ ಪಂದ್ಯಾವಳಿಯನ್ನು ಆಯೋಜಿಸುತ್ತಿದೆ. ಹತ್ತು ತಂಡಗಳು 18 ದಿನಗಳಲ್ಲಿ 23 ಪಂದ್ಯಗಳನ್ನು ಆಡಲಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com