ಐಪಿಎಲ್ 2024: ಲಕ್ನೋ ವಿರುದ್ಧ 9.4 ಓವರ್​ಗಳಲ್ಲೇ ಗೆದ್ದು ಬೀಗಿದ ಹೈದರಾಬಾದ್​

ಐಪಿಎಲ್ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೇವಲ 9.4 ಓವರ್​ಗಳಲ್ಲೇ ಗೆದ್ದು ಬೀಗಿದೆ.
ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ
ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ

ಹೈದರಾಬಾದ್: ಐಪಿಎಲ್ 2024ರ 57ನೇ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೇವಲ 9.4 ಓವರ್​ಗಳಲ್ಲೇ ಗೆದ್ದು ಬೀಗಿದೆ.

ಇಂದು ಹೈದರಾಬಾದ್ ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು 165 ರನ್ ಗಳಿಸಿತು.

ಗೆಲುವಿಗೆ 166 ರನ್ ಗಳ ಗುರಿ ಬೆನ್ನತ್ತಿದ ಸನ್ ರೈಸರ್ಸ್ ಹೈದರಾಬಾದ್​ ಗೆ, ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಅವರು ಬಿರುಸಿನ ಆರಂಭ ನೀಡಿದರು. ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ ಅಜೇಯ 89 ರನ್ ಗಳಿಸಿದರೆ, ಅಭಿಷೇಕ್ ಶರ್ಮಾ 28 ಎಸೆತಗಳಲ್ಲಿ ಅಜೇಯ 75 ರನ್ ಗಳಿಸಿದರು. ಇಬ್ಬರೂ 166 ರನ್‌ಗಳ ಶತಕದ ಜೊತೆಯಾಟವಾಡಿದರು. ಇವರಿಬ್ಬರು 16 ಬೌಂಡರಿ ಹಾಗೂ 14 ಸಿಕ್ಸರ್‌ಗಳನ್ನು ಬಾರಿಸಿದರು.

ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ
IPL 2024: ಪಂಜಾಬ್ ಕಿಂಗ್ಸ್ ವಿರುದ್ಧದ ಸವಾಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಿದ್ಧತೆ, ಗೆಲ್ಲೋದು ಯಾರು?

ಲಕ್ನೋ ಬೌಲರ್‌ಗಳಿಗೆ ಒಂದೇ ಒಂದು ವಿಕೆಟ್ ಕೂಡ ಕಬಳಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಹೈದರಾಬಾದ್ ತಂಡ 10 ವಿಕೆಟ್‌ಗಳಿಂದ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಹೈದರಾಬಾದ್ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಏರಿದೆ ಮತ್ತು ಪ್ಲೇ ಆಫ್ ಸ್ಥಾನದ ಅವಕಾಶವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com