IPL 2024: ಕೊಹ್ಲಿ ಸ್ಫೋಟಕ ಬ್ಯಾಟಿಂಗ್, ಫೀಲ್ಡಿಂಗ್; ಪಂಜಾಬ್ ವಿರುದ್ಧ RCB ಭರ್ಜರಿ ಗೆಲುವು

ಐಪಿಎಲ್ 2024ರ 58ನೇ ಪಂದ್ಯದಲ್ಲಿ ವಿರಾಟ್​ ಕೊಹ್ಲಿಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ, ಪಂಜಾಬ್ ಕಿಂಗ್ಸ್ ವಿರುದ್ಧ 60 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ.
ವಿರಾಟ್​ ಕೊಹ್ಲಿ
ವಿರಾಟ್​ ಕೊಹ್ಲಿ

ಧರ್ಮಶಾಲಾ: ಐಪಿಎಲ್ 2024ರ 58ನೇ ಪಂದ್ಯದಲ್ಲಿ ವಿರಾಟ್​ ಕೊಹ್ಲಿಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ, ಪಂಜಾಬ್ ಕಿಂಗ್ಸ್ ವಿರುದ್ಧ 60 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಟೂರ್ನಿಯಲ್ಲಿ ಸತತ ನಾಲ್ಕನೇ ಜಯ ದಾಖಲಿಸಿದ ಆರ್ ಸಿಬಿ ತನ್ನ ಪ್ಲೇಆಫ್ ಕನಸನ್ನು ಇನ್ನು ಜೀವಂತವಾಗಿಸಿರಿಸಿಕೊಂಡಿದೆ.

ಇಂದು ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ, ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್​ ಕಳೆದುಕೊಂಡು 241 ರನ್ ಕಲೆಹಾಕಿತು.

ಗೆಲುವಿಗೆ 242 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಪಂಜಾಬ್, 17 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಇದರೊಂದಿಗೆ ಪಂಜಾಬ್‌ ಪ್ಲೇಆಫ್‌ ರೇಸ್‌ನಿಂದ ಹೊರ ಬಿದ್ದಿದೆ. ಪಂಜಾಬ್ 12 ಪಂದ್ಯಗಳಲ್ಲಿ 4ರಲ್ಲಿ ಮಾತ್ರ ಗೆದ್ದಿದೆ. ಆದರೆ ಆರ್‌ಸಿಬಿ 12 ಪಂದ್ಯಗಳಲ್ಲಿ ಐದನೇ ಗೆಲುವು ದಾಖಲಿಸಿದೆ.

ವಿರಾಟ್​ ಕೊಹ್ಲಿ
IPL 2024: ಪಂಜಾಬ್ ಕಿಂಗ್ಸ್ ವಿರುದ್ಧದ ಸವಾಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಿದ್ಧತೆ, ಗೆಲ್ಲೋದು ಯಾರು?

ಆರ್​ಸಿಬಿ ಪರ ಫಾಫ್​ ಡು ಪ್ಲೆಸಿಸ್​ ಮತ್ತೊಂದು ಬಾರಿ ಕಳಪೆ ಪ್ರದರ್ಶನ ನೀಡಿದರು. 9 ರನ್​ಗೆ ಅವರು ಔಟಾದರು. ಹೀಗಾಗಿ 19 ರನ್​ಗೆ ಒಂದು ವಿಕೆಟ್​ ಕಳೆದುಕೊಂಡ ಆರ್​ಸಿಬಿಗೆ ಸಂಕಷ್ಟ ಶುರುವಾಯಿತು. ಬಳಿಕ ಬಂದ ವಿಲ್​ ಜ್ಯಾಕ್ಸ್​ ಕೂಡ 12 ರನ್​ಗೆ ಸೀಮಿತಗೊಂಡರು. ಆದರೆ, ಮತ್ತೊಂದು ಬದಿಯಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ 7 ಬೌಂಡರಿ ಹಾಗೂ 6 ಸಿಕ್ಸರ್‌ಗಳ ನೆರವಿನಿಂದ 92 ರನ್ ಗಳಿಸಿ ಔಟಾದರು. ಈ ಮೂಲಕ ವಿರಾಟ್ ತಮ್ಮ ಒಂಬತ್ತನೇ ಶತಕವನ್ನು ಮಿಸ್ ಮಾಡಿಕೊಂಡರು.

ಆರ್​ಸಿಬಿ ಪರ ಮೊಹಮ್ಮಸ್ ಸಿರಾಜ್​ 3 ವಿಕೆಟ್​, ಸ್ವಪ್ನಿಲ್ ಸಿಂಗ್, ಲಾಕಿ ಫರ್ಗ್ಯೂಸನ್​ ಹಾಗೂ ಕರಣ್ ಶರ್ಮಾ ತಲಾ 1 ವಿಕೆಟ್ ಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com