IPL 2024: RCB ವಿರುದ್ಧದ ಪಂದ್ಯ, ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್

ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ IPL 2024 ಟೂರ್ನಿಯ ಅಂತಿಮ ಲೀಗ್ ಹಂತದ ಪಂದ್ಯದಲ್ಲಿ ಆರ್ ಸಿಬಿ- ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ
Updated on: 

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ IPL 2024 ಟೂರ್ನಿಯ ಅಂತಿಮ ಲೀಗ್ ಹಂತದ ಪಂದ್ಯದಲ್ಲಿ ಆರ್ ಸಿಬಿ- ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ. CSK ಗೆಲುವಿನ ನಂತರ, ಮುಂದಿನ ಪಂದ್ಯದತ್ತ ಕ್ರಿಕೆಟ್ ಅಭಿಮಾನಿಗಳು ಗಮನ ಕೇಂದ್ರೀಕರಿಸಿದ್ದು, ಆರ್ ಸಿಬಿ- ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯ ಉಭಯ ತಂಡಗಳಿಗೂ ಮಹತ್ವದ ಪಂದ್ಯವಾಗಿದೆ.

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ
RCB ವಿರುದ್ಧ DC: ಮುಂದಿನ ಪಂದ್ಯಕ್ಕೆ ರಿಷಬ್ ಪಂತ್ ಅಮಾನತು; ಇದು ಆರ್‌ಸಿಬಿಗೆ ವರವಾಗುತ್ತಾ?

ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಒಂದು ಪಂದ್ಯ ನಿಷೇಧದೊಂದಿಗೆ ಉಪನಾಯಕ ಅಕ್ಷರ್ ಪಟೇಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಟಾಸ್ ಗೆಲುವಿನ ಬಳಿಕ ಮಾತನಾಡಿದ ಪಟೇಲ್, ವಿಕೆಟ್ ಪಡೆಯಲು ಬೆಂಗಳೂರು ಪಿಚ್ ಉತ್ತಮವಾಗಿದೆ. ಇದು ಚೇಸಿಂಗ್ ಮೈದಾನ, ಚಿಕ್ಕ ಮೈದಾನ. ಆದ್ದರಿಂದ ಎದುರಾಳಿಗಳನ್ನು ಕಡಿಮೆ ರನ್ ಗಳಿಗೆ ಕಟ್ಟಿಹಾಕಿದರೆ ಉತ್ತಮ ಪ್ರಾಬಲ್ಯ ಸಾಧಿಸಬಹುದು ಎಂದು ಹೇಳಿದರು.

ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್, ಕೆಲವು ದಿನಗಳಿಂದ ಉತ್ತಮವಾಗಿ ಆಡುತ್ತಿದ್ದು, ಇಂದಿನ ಪಂದ್ಯದಲ್ಲೂ ಚೆನ್ನಾಗಿ ಆಡಿ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.

ಆರ್ ಸಿಬಿ ತಂಡ ಇಂತಿದೆ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಮಹಿಪಾಲ್ ಲೊಮ್ರೋರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಯಶ್ ದಯಾಲ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್. ವಿರಾಟ್ ಕೊಹ್ಲಿ 250ನೇ ಐಪಿಎಲ್ ಪಂದ್ಯ ಆಡಲಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಂತಿದೆ: ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಶಾಯ್ ಹೋಪ್, ಟ್ರಿಸ್ಟಾನ್ ಸ್ಟಬ್ಸ್, ಕುಮಾರ್ ಕುಶಾಗ್ರಾ, ಅಕ್ಸರ್ ಪಟೇಲ್ (ನಾಯಕ), ಕುಲದೀಪ್ ಯಾದವ್, ರಸಿಖ್ ಸಲಾಮ್ ದಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com