ಬಿಸಿಸಿಐ
ಬಿಸಿಸಿಐ

ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ BCCI ಅರ್ಜಿ ಆಹ್ವಾನ

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಕೊನೆಗೊಳ್ಳಲಿದ್ದು, ಮುಂದಿನ ಮೂರೂವರೆ ವರ್ಷಗಳ ಅವಧಿಗೆ ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಬಿಸಿಸಿಐ ಸೋಮವಾರ ಅರ್ಜಿ ಆಹ್ವಾನಿಸಿದೆ.
Published on

ನವದೆಹಲಿ: ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್‌ಇಂಡೀಸ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನೊಂದಿಗೆ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಕೊನೆಗೊಳ್ಳಲಿದ್ದು, ಮುಂದಿನ ಮೂರೂವರೆ ವರ್ಷಗಳ ಅವಧಿಗೆ ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಬಿಸಿಸಿಐ ಸೋಮವಾರ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಮೇ 27 ಕೊನೆ ದಿನಾಂಕವಾಗಿದೆ ಎಂದು ಭಾರತೀಯ ಕ್ರಿಕೆಟ್ ಮಂಡಳಿಯ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

'ಆಯ್ಕೆ ಪ್ರಕ್ರಿಯೆಯು ಸಲ್ಲಿಕೆಯಾದ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ಒಳಗೊಂಡಿರುತ್ತದೆ. ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನಗಳನ್ನು ಒಳಗೊಂಡಿರುತ್ತದೆ' ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆಯಾದ ಹೊಸ ಕೋಚ್ ಅಮೆರಿಕದಲ್ಲಿ T20 ವಿಶ್ವಕಪ್ ಟೂರ್ನಿ ಮುಕ್ತಾಯಗೊಂಡ ನಂತರ ಜುಲೈ 1 ರಿಂದಲೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತಾರೆ. ಅವರ ಅವಧಿಯು 2027ರ ಡಿಸೆಂಬರ್ 31 ರಂದು ಮುಕ್ತಾಯಗೊಳ್ಳುತ್ತದೆ.

ಕೋಚ್ ಆಗಲು ಮಾನದಂಡಗಳೇನು?

ಅಭ್ಯರ್ಥಿಯು 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. ಕನಿಷ್ಠ 30 ಟೆಸ್ಟ್ ಅಥವಾ 50 ODIಗಳನ್ನು ಆಡಿರಬೇಕು ಮತ್ತು ಅರ್ಜಿದಾರರು ಕನಿಷ್ಠ ಎರಡು ವರ್ಷಗಳ ಕಾಲ ಪೂರ್ಣ ಸದಸ್ಯರಾಗಿ ಇದೇ ರೀತಿಯ ಪಾತ್ರವನ್ನು ನಿರ್ವಹಿಸರಬೇಕು ಎಂದು BCCI ಷರತ್ತು ವಿಧಿಸಿದೆ.

ಬಿಸಿಸಿಐ
ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಯಲ್ಲಿ ರಾಹುಲ್ ದ್ರಾವಿಡ್ ಮುಂದುವರಿಕೆ; ಇತರ ಸಿಬ್ಬಂದಿಗಳ ಅವಧಿಯೂ ವಿಸ್ತರಣೆ

ಇತ್ತೀಚೆಗೆ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು, ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಕೊನೆಗೊಳ್ಳುತ್ತಿದೆ. ಕೋಚ್ ಹುದ್ದೆಯಲ್ಲಿ ಮುಂದುವರಿಯಲು ಬಯಸಿದರೆ ಅವರು ಮತ್ತೆ ಅರ್ಜಿ ಸಲ್ಲಿಸಬೇಕು. ನಾವು ಮೂರು ವರ್ಷಗಳ ಕಾಲ ದೀರ್ಘಾವಧಿಯ ಕೋಚ್‌ಗಾಗಿ ಹುಡುಕುತ್ತಿದ್ದೇವೆ ಆಯ್ದ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು.

ಆದರೆ, ಪ್ರಸ್ತಾವಿತ 3.5 ವರ್ಷಗಳ ಅವಧಿಯು ದ್ರಾವಿಡ್ ಅವರು ನವೆಂಬರ್ 2021 ರಿಂದ ಈಗಾಗಲೇ ಕೋಚ್ ಆಗಿ ಸೇವೆ ಸಲ್ಲಿಸಿರುವುದರಿಂದ ಮರು ಅರ್ಜಿ ಸಲ್ಲಿಸಲು ಕಠಿಣವಾಗಿದೆ.

ಮೂಲತಃ, ರಾಹುಲ್ ದ್ರಾವಿಡ್ ಅವರ ಎರಡು ವರ್ಷಗಳ ಒಪ್ಪಂದವು ಕಳೆದ ವರ್ಷ ಸ್ವದೇಶದಲ್ಲಿ ನಡೆದ 50-ಓವರ್‌ಗಳ ವಿಶ್ವಕಪ್‌ನೊಂದಿಗೆ ಕೊನೆಗೊಂಡಿತು. ಆದರೆ, ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಮತ್ತು ಅಮೆರಿಕದಲ್ಲಿ T20 ವಿಶ್ವಕಪ್‌ಗೆ ಮುಂಚಿತವಾಗಿ ಹೊಸ ತರಬೇತುದಾರರನ್ನು ನೇಮಿಸಲು ಸಮಯದ ಕೊರತೆಯ ದೃಷ್ಟಿಯಿಂದ ಅಧಿಕಾರವಧಿಯನ್ನು ವಿಸ್ತರಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com