
ನವದೆಹಲಿ: ರಾಷ್ಟ್ರ ರಾಜಧಾನಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್ 2024 ಟೂರ್ನಿಯ 64ನೇ ಪಂದ್ಯದಲ್ಲಿ ಅಭಿಷೇಕ್ ಪೊರೆಲ್, ಟ್ರಿಸ್ಟಾನ್ ಸ್ಟಬ್ಸ್ ಅವರ ಅಬ್ಬರದ ಬ್ಯಾಟಿಂಗ್ ಹಾಗೂ ಇಶಾಂತ್ ಶರ್ಮಾ ಅವರ 3 ವಿಕೆಟ್ ಗಳ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 19 ರನ್ ಗಳಿಂದ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿತು. ಅಭಿಷೇಕ್ ಪೊರೆಲ್ 58, ಸಾಯಿ ಹೊಪ್ 38, ರಿಷಭ್ ಪಂತ್ 33, ಟ್ರಿಸ್ಟಾನ್ ಸ್ಟಬ್ಸ್ 57, ಅಕ್ಷರ್ ಪಟೇಲ್ 14 ರನ್ ಗಳಿಸಿದರು.
ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 209ರನ್ ಗಳ ಗುರಿ ಬೆನ್ನಟ್ಟಿದ್ದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಲಷ್ಟೇ ಶಕ್ತವಾಯಿತು. ಲಕ್ನೋ ಪರ ನಿಕೋಲಸ್ ಪೊರೆನ್ 61, ಅರ್ಷದ್ ಖಾನ್ 58 ರನ್ ಗಳಿಸದದ್ದು ಹೊರತುಪಡಿಸಿದರೆ ಉಳಿದ ಯಾವುದೇ ಆಟಗಾರರು 6 ರನ್ ಗಿಂತ ಹೆಚ್ಚಿಗೆ ಗಳಿಸಲಿಲ್ಲ ಇದರಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ 19 ರನ್ ಗಳಿಂದ ಗೆಲುವಿನ ನಗೆ ಬೀರಿತು.
Advertisement