
ಮುಂಬೈ: ಹಾಲಿ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಸೋಲಿನ ಸರಣಿ ಮುಂದುವರೆದಿದ್ದು, ಇಂದು ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧವೂ ಹಾರ್ದಿಕ್ ಪಾಂಡ್ಯಾ ಪಡೆ ಸೋಲು ಕಂಡಿದೆ.
ಮೊದಲ ಬ್ಯಾಟ್ ಮಾಡಿದ ಲಕ್ನೊ ತಂಡ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 214 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿ ಮುಂಬೈ ತನ್ನೆಲ್ಲ ಓವರ್ಗಳು ಮುಕ್ತಾಯಗೊಂಡಾಗ 6 ವಿಕೆಟ್ ನಷ್ಟಕ್ಕೆ 196 ರನ್ ಬಾರಿಸಿ 18 ರನ್ ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು.
ಐಪಿಎಲ್ 17ನೇ ಆವೃತ್ತಿಯ (IPL 2024) 14 ಪಂದ್ಯಗಳಲ್ಲಿ 10 ಸೋಲು ಮತ್ತು ಕೇವಲ 4 ಗೆಲುವಿನೊಂದಿಗೆ 8 ಅಂಕಗಳೊಂದಿಗೆ ಅಭಿಯಾನ ಮುಗಿಸಿದೆ.
ಇನ್ನು ತವರಿನಲ್ಲಿ ನಡೆದ ಕೊನೇ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿಯೂ 18 ರನ್ಗಳ ಸೋಲಿಗೆ ಒಳಗಾಗಿದೆ. ಎರಡೂ ತಂಡಗಳಿಗೆ ಇದು ಕೊನೇ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಗೆದ್ದಿರುವ ಲಕ್ನೊ ಸೂಪರ್ ಜೈಂಟ್ಸ್ ತಂಡ ಒಟ್ಟು 7 ಗೆಲುವಿನೊಂದಿಗೆ 14 ಅಂಕಗಳ ಸಮೇತ ಏಳನೇ ಸ್ಥಾನ ಪಡೆದುಕೊಂಡಿದೆ.
ವಾಖೆಂಡೆ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಲಕ್ನೊ ತಂಡ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 214 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿ ಮುಂಬೈ ತನ್ನೆಲ್ಲ ಓವರ್ಗಳು ಮುಕ್ತಾಯಗೊಂಡಾಗ 6 ವಿಕೆಟ್ ನಷ್ಟಕ್ಕೆ 196 ರನ್ ಬಾರಿಸಿ 18ರನ್ ಅಂತರದ ಸೋಲೊಪ್ಪಿಕೊಂಡಿತು.
Advertisement