IPL 2024 Qualifier 1: SRH ವಿರುದ್ಧ ಭರ್ಜರಿ ಬ್ಯಾಟಿಂಗ್; ಧೋನಿ, ರೋಹಿತ್, ವಾರ್ನರ್ ದಾಖಲೆ ಸರಿಗಟ್ಟಿದ Shreyas Aiyer!

ಹಾಲಿ ಐಪಿಎಲ್ ಟೂರ್ನಿಯ ಮೊದಲ ಕ್ವಾಲಿಫೈಯರ್ ನಲ್ಲಿ ಹೈದರಾಬಾದ್ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿರುವ ಕೋಲ್ಕತಾ ನಾಯಕ ಶ್ರೇಯಸ್ ಅಯ್ಯರ್ ಅಪರೂಪದ ದಾಖಲೆ ನಿರ್ಮಿಸಿ ಎಲೈಟ್ ಗ್ರೂಪ್ ಗೆ ಸೇರ್ಪಡೆಯಾಗಿದ್ದಾರೆ.
KKR Skipper Shreyas Iyer
ಶ್ರೇಯಸ್ ಅಯ್ಯರ್
Updated on

ಅಹ್ಮದಾಬಾದ್: ಹಾಲಿ ಐಪಿಎಲ್ ಟೂರ್ನಿಯ ಮೊದಲ ಕ್ವಾಲಿಫೈಯರ್ ನಲ್ಲಿ ಹೈದರಾಬಾದ್ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿರುವ ಕೋಲ್ಕತಾ ನಾಯಕ ಶ್ರೇಯಸ್ ಅಯ್ಯರ್ ಅಪರೂಪದ ದಾಖಲೆ ನಿರ್ಮಿಸಿ ಎಲೈಟ್ ಗ್ರೂಪ್ ಗೆ ಸೇರ್ಪಡೆಯಾಗಿದ್ದಾರೆ.

ಹೌದು.. ಇಂದು ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಕ್ವಾಲಿಫೈಯರ್ ನಲ್ಲಿ ಹೈದರಾಬಾದ್ ತಂಡವನ್ನು ಕೋಲ್ಕತಾ 8 ವಿಕೆಟ್ ಗಳಿಂದ ಮಣಿಸಿ ಭರ್ಜರಿಯಾಗಿ ಫೈನಲ್ ಪ್ರವೇಶಿಸಿತು. ಈ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದ ನಾಯಕ ಶ್ರೇಯಸ್ ಅಯ್ಯರ್ ಕೇವಲ 24 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 5 ಬೌಂಡರಿಗಳ ನೆರವಿನಿಂದ ಅಜೇಯ 58 ರನ್ ಸಿಡಿಸಿ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು.

KKR Skipper Shreyas Iyer
IPL 2024 Qualifier 1: ಐಪಿಎಲ್ ಇತಿಹಾಸದಲ್ಲೇ ಕೋಲ್ಕತಾಗೆ 2ನೇ ಅತಿದೊಡ್ಡ ಗೆಲುವು, 3ನೇ ಸ್ಥಾನಕ್ಕೆ KKR!

ಅಂತೆಯೇ ಈ ಭರ್ಜರಿ ಬ್ಯಾಟಿಂಗ್ ಮೂಲಕ ಶ್ರೇಯಸ್ ಅಯ್ಯರ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಎಂಎಸ್ ಧೋನಿ, ಮುಂಬೈ ಇಂಡಿಯನ್ಸ್ ತಂಡದ ರೋಹಿತ್, ಹೈದರಾಬಾದ್ ತಂಡ ಡೇವಿಡ್ ವಾರ್ನರ್ ಇರುವ ಎಲೈಟ್ ಗ್ರೂಪ್ ಗೆ ಸೇರ್ಪಡೆಯಾಗಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಪ್ಲೇಆಫ್ ನಲ್ಲಿ ಅತೀ ಹೆಚ್ಚು ಅರ್ಧಶತಕ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಶ್ರೇಯಸ್ ಅಯ್ಯರ್ ಸೇರ್ಪಡೆಯಾಗಿದ್ದು, ಧೋನಿ, ರೋಹಿತ್, ವಾರ್ನರ್ ದಾಖಲೆ ಸರಿಗಟ್ಟಿದ್ದಾರೆ. ಇದು ಅವರ ಐಪಿಎಲ್ ಪ್ಲೇಆಫ್ ನ 2ನೇ ಅರ್ಧಶತಕವಾಗಿದೆ.

Most 50-plus scores as a captain in playoffs

  • 2 - MS Dhoni

  • 2 - Rohit Sharma

  • 2 - David Warner

  • 2 - Shreyas Iyer*

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com