
ಅಹಮದಾಬಾದ್: ಇಂದು ಕ್ವಾಲಿಫೈಯರ್-1ರ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಸನ್ ರೈಸರ್ಸ್ ಹೈದರಾಬಾದ್(SRH) ತಂಡ ಕೆಕೆಆರ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
SRH ನಾಯಕ ಕ್ಯಾಪ್ಟನ್ ಪ್ಯಾಟ್ ಕಮ್ಮಿನ್ಸ್ ತಮ್ಮ ತಂಡದ ಬ್ಯಾಟಿಂಗ್ ಪರಾಕ್ರಮದ ಬಗ್ಗೆ ವಿಶ್ವಾಸ ಹೊಂದಿದ್ದಾರೆ. ನಮ್ಮ ತಂಡದ ಆಟಗಾರರು ಅದ್ಬುತವಾಗಿ ಆಟವಾಡುತ್ತಾರೆ ಎಂಬ ವಿಸ್ವಾಸವಿದೆ.ಅವರು ತಮ್ಮ ಫಾರ್ಮ್ ನ್ನು ಮುಂದುವರಿಸಬಹುದು, ಹೆಚ್ಚು ಸ್ಕೋರಿಂಗ್ ನಿರೀಕ್ಷಿಸುತ್ತಿದ್ದೇವೆ ಎಂದರು.
KKR ತಂಡ ನಾಯಕ ಶ್ರೇಯಸ್ ಅಯ್ಯರ್, ನಾನು ಮೊದಲು ಬೌಲಿಂಗ್ ಮಾಡಲು ಇಷ್ಟಪಡುತ್ತಿದ್ದರೂ, ಕ್ಯುರೇಟರ್ ಮಿಶ್ರ-ಮೇಲ್ಮೈ ಪಿಚ್ ನ್ನು ನೋಡುತ್ತಿದ್ದೇವೆ. ಅದು ಹೇಗೆ ನಮಗೆ ಆಟಕ್ಕೆ ಅನುಕೂಲವಾಗುತ್ತದೆ ಎಂದು ನೋಡಬೇಕು. ಆವೇಗವನ್ನು ಕಾಯ್ದುಕೊಳ್ಳುವುದು ಮತ್ತು ಪ್ರಸ್ತುತ ಕ್ಷಣದ ಮೇಲೆ ಕೇಂದ್ರೀಕರಿಸುವುದು ಇಂದಿನ ಪಂದ್ಯದಲ್ಲಿ ಮುಖ್ಯವಾಗಿದೆ ಎಂದರು.
ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ವಿಜಯಕಾಂತ್ ವ್ಯಾಸಕಾಂತ್, ಟಿ.ನಟರಾಜನ್ ಇದ್ದಾರೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ ಆಟಗಾರರಿದ್ದಾರೆ.
Advertisement