
ಅಹ್ಮದಾಬಾದ್: ಹಾಲಿ ಐಪಿಎಲ್ ಟೂರ್ನಿಯ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಅಹ್ಮದಾಬಾದ್ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟಿಂಗ್ ಮಾಡಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಎರಡನೇ ಎಲಿಮಿನೇಟರ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.
ಆ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.
ತಂಡಗಳು ಇಂತಿವೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು:
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮೊರೊರ್, ಕರ್ಣ್ ಶರ್ಮಾ, ಯಶ್ ದಯಾಳ್, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್
ರಾಜಸ್ಥಾನ್ ರಾಯಲ್ಸ್:
ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್
Advertisement