
ಅಹ್ಮದಾಬಾದ್: ಹಾಲಿ ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ವಿರಾಟ್ ಕೊಹ್ಲಿ ಮತ್ತೊಂದು ಸಾಧನೆ ಮಾಡಿದ್ದು, ಐಪಿಎಲ್ ನಲ್ಲಿ 8 ಸಾವಿರ ರನ್ ಗಳಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಇಂದು ಅಹ್ಮದಾಬಾದ್ ನಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ 24 ಎಸೆತಗಳಲ್ಲಿ 33 ರನ್ ಕಲೆಹಾಕಿದ ವಿರಾಟ್ ಕೊಹ್ಲಿ, ಐಪಿಎಲ್ ನಲ್ಲಿ ತಮ್ಮ ರನ್ ಗಳಿಕೆಯನ್ನು 8 ಸಾವಿರ ಗಡಿ ದಾಟಿದರು.
ಆ ಮೂಲಕ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಕೀರ್ತಿಗೂ ಭಾಜನರಾದರು. ಕೊಹ್ಲಿ ನಂತರದ ಸ್ಥಾನದಲ್ಲಿ ಶಿಖರ್ ಧವನ್ ಇದ್ದು, ಧವನ್ ಒಟ್ಟು 6769 ರನ್ ಗಳಿಸಿದ್ದಾರೆ.
ಹಾಲಿ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಒಟ್ಟು 15 ಪಂದ್ಯಗಳಿಂದ 61.75 ಸರಾಸರಿಯಲ್ಲಿ 741 ರನ್ ಗಳಿಸಿ ಟೂರ್ನಿಯಲ್ಲಿ ಗರಿಷ್ಠ ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. 2ನೇ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಇದ್ದು ಅವರು 14 ಪಂದ್ಯಗಳಿಂದ 583 ರನ್ ಕಲೆಹಾಕಿದ್ದಾರೆ.
Advertisement