
ನವದೆಹಲಿ: 2024ರ ಐಪಿಎಲ್ ಟ್ರೋಫಿಯನ್ನು ಕೋಲ್ಕತ್ತಾ ನೈಟ್ ರೈಡರ್ಸ್ (KKR) ಗೆದ್ದುಕೊಂಡಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್ ಫೈನಲ್‌ನಲ್ಲಿ 8 ವಿಕೆಟ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಸೋಲಿಸಿ ಮೂರನೇ ಬಾರಿಗೆ ಟ್ರೋಫಿ ಗೆದ್ದು ಬೀಗಿದೆ.
ಈ ಇಡೀ ಐಪಿಎಲ್ ಟೂರ್ನಿಯಲ್ಲಿ ಹಲವು ದಾಖಲೆಗಳು ಮುರಿದಿದ್ದರೆ ಹಲವು ಹೊಸ ದಾಖಲೆಗಳು ಸೃಷ್ಟಿಯಾಗಿವೆ. ಹಾಗಾದರೆ ಈ ಬಾರಿ ಯಾವ ಆಟಗಾರನು ಪರ್ಪಲ್ ಕ್ಯಾಪ್ ಮತ್ತು ಆರೆಂಜ್ ಕ್ಯಾಂಪ್ ಸಿಕ್ಕಿದೆ ಎಂಬುದನ್ನು ನೋಡೋಣ.
ಈ ಐಪಿಎಲ್ ಋತುವಿನಲ್ಲಿ ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್ ಸಾಧಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮತ್ತು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವೇಗದ ಬೌಲರ್ ಹರ್ಷಲ್ ಪಟೇಲ್ ಪರ್ಪಲ್ ಕ್ಯಾಪ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಋತುವಿನ ಉದ್ದಕ್ಕೂ ಬ್ಯಾಟ್‌ನೊಂದಿಗೆ ಅದ್ಭುತವಾಗಿ ಆಡಿದರು. ಹೆಚ್ಚು ರನ್ ಗಳಿಸುವ ಮೂಲಕ ಆರೆಂಜ್ ಕ್ಯಾಪ್ ಗಳಿಸಿದ್ದಾರೆ.
35 ವರ್ಷದ ವಿರಾಟ್ ಕೊಹ್ಲಿ ಐಪಿಎಲ್ 2024ರಲ್ಲಿ 15 ಪಂದ್ಯಗಳಲ್ಲಿ 61.75 ಸರಾಸರಿ ಮತ್ತು 154.69 ಸ್ಟ್ರೈಕ್ ರೇಟ್‌ನಲ್ಲಿ 741 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಕಿಂಗ್ ಕೊಹ್ಲಿ ಒಂದು ಶತಕ ಮತ್ತು ಐದು ಅರ್ಧ ಶತಕಗಳನ್ನು ಗಳಿಸಿದರು. ವಿರಾಟ್ ಎರಡನೇ ಬಾರಿಗೆ ಆರೆಂಜ್ ಕ್ಯಾಪ್ ವಶಪಡಿಸಿಕೊಂಡಿದ್ದಾರೆ. ಐಪಿಎಲ್‌ನಲ್ಲಿ ಎರಡು ಬಾರಿ ಆರೆಂಜ್ ಕ್ಯಾಪ್ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಕೊಹ್ಲಿ 2016ರ ಋತುವಿನಲ್ಲಿ 973 ರನ್ ಗಳಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದರು. ಹರ್ಷಲ್ ಪಟೇಲ್ ಗರಿಷ್ಠ 24 ವಿಕೆಟ್ ಪಡೆಯುವ ಮೂಲಕ ಪರ್ಪಲ್ ಕ್ಯಾಪ್ ಪಡೆದರು.
ಐಪಿಎಲ್ 2024ರಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರ
• ವಿರಾಟ್ ಕೊಹ್ಲಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು) - 741 ರನ್
• ರುತುರಾಜ್ ಗಾಯಕ್ವಾಡ್ (ಚೆನ್ನೈ ಸೂಪರ್ ಕಿಂಗ್ಸ್) - 583 ರನ್
• ರಿಯಾನ್ ಪರಾಗ್ (ರಾಜಸ್ಥಾನ್ ರಾಯಲ್ಸ್) - 573 ರನ್
• ಟ್ರಾವಿಸ್ ಹೆಡ್ (ಸನ್ ರೈಸರ್ಸ್ ಹೈದರಾಬಾದ್) – 567 ರನ್
• ಸಂಜು ಸ್ಯಾಮ್ಸನ್ (ರಾಜಸ್ಥಾನ್ ರಾಯಲ್ಸ್) – 531 ರನ್
ಐಪಿಎಲ್ 2024 ರಲ್ಲಿ ಅತಿ ಹೆಚ್ಚು ವಿಕೆಟ್
• ಹರ್ಷಲ್ ಪಟೇಲ್ (ಪಂಜಾಬ್ ಕಿಂಗ್ಸ್) - 24 ವಿಕೆಟ್
• ವರುಣ್ ಚಕ್ರವರ್ತಿ (ಕೋಲ್ಕತ್ತಾ ನೈಟ್ ರೈಡರ್ಸ್) - 21 ವಿಕೆಟ್
• ಜಸ್ಪ್ರೀತ್ ಬುಮ್ರಾ (ಮುಂಬೈ ಇಂಡಿಯನ್ಸ್) - 20 ವಿಕೆಟ್
• ಆಂಡ್ರೆ ರಸೆಲ್ (ಕೋಲ್ಕತ್ತಾ ನೈಟ್ ರೈಡರ್ಸ್) - 19 ವಿಕೆಟ್
• ಹರ್ಷಿತ್ ರಾಣಾ (ಕೋಲ್ಕತ್ತಾ ನೈಟ್ ರೈಡರ್ಸ್) – 19 ವಿಕೆಟ್
Advertisement