3rd Test: ಭಾರತಕ್ಕೆ ಮತ್ತೊಂದು ಹೀನಾಯ ಸೋಲು, ಸರಣಿ ಕ್ಲೀನ್ ಸ್ವೀಪ್ ಮಾಡಿದ ನ್ಯೂಜಿಲೆಂಡ್!

ನ್ಯೂಜಿಲೆಂಡ್ ನೀಡಿದ್ದ 147 ರನ್ ಗಳ ಸಾಮಾನ್ಯ ಗುರಿಯನ್ನು ಬೆನ್ನು ಹತ್ತಿದ ಭಾರತ ತನ್ನ 2ನೇ ಇನ್ನಿಂಗ್ಸ್ ನಲ್ಲಿ ಕೇವಲ 121ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ 25 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.
New Zealand won by 25 runs against India
ಭಾರತಕ್ಕೆ ಮತ್ತೊಂದು ಹೀನಾಯ ಸೋಲು
Updated on

ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲೂ ಭಾರತ ತಂಡ ಹೀನಾಯ ಸೋಲು ಕಂಡಿದ್ದು, ಆ ಮೂಲಕ 3 ಪಂದ್ಯಗಳ ಸರಣಿಯಲ್ಲಿ ಭಾರತ 0-3 ಅಂತರದ ಹೀನಾಯ ವೈಟ್ ವಾಶ್ ಸೋಲು ಕಂಡಿದೆ.

ನ್ಯೂಜಿಲೆಂಡ್ ನೀಡಿದ್ದ 147 ರನ್ ಗಳ ಸಾಮಾನ್ಯ ಗುರಿಯನ್ನು ಬೆನ್ನು ಹತ್ತಿದ ಭಾರತ ತನ್ನ 2ನೇ ಇನ್ನಿಂಗ್ಸ್ ನಲ್ಲಿ ಕೇವಲ 121ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ 25 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

New Zealand won by 25 runs against India
3rd Test: ಮತ್ತೆ ಕುಸಿದ ಭಾರತಕ್ಕೆ Rishab Pant ಆಸರೆ, 92/6

ಭಾರತದ ಪರ ರಿಷಬ್ ಪಂತ್ 64 ರನ್ ಗಳಿಸಿ ಏಕಾಂಗಿ ಹೋರಾಟ ನಡೆಸಿದರೂ ಇತರೆ ಆಟಗಾರರಿಂದ ಅವರಿಗೆ ಸಾಥ್ ದೊರೆಯಲಿಲ್ಲ. ಅಂತಿಮವಾಗಿ ಭಾರತ ತಂಡ 121ರನ್ ಗಳಿಗೆ ಆಲೌಟ್ ಆಯಿತು.

ನ್ಯೂಜಿಲೆಂಡ್ ಪರ ಎಜಾಜ್ ಪಟೇಲ್ 6 ವಿಕೆಟ್ ಕಬಳಿಸಿದರೆ, ಗ್ಲೇನ್ ಫಿಲಿಪ್ಸ್ 3 ಮತ್ತು ಮ್ಯಾಟ್ ಹೆನ್ರಿ 1 ವಿಕೆಟ್ ಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com