ಬೆಂಗಳೂರು: ಐಪಿಎಲ್ 2025ರ ಆಟಗಾರರ ಹರಾಜು ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಲೀಕರು ಆರ್ ಸಿಬಿ ಅಭಿಮಾನಿಗಳಿಗೆ ಬಿಕ್ ಶಾಕ್ ನೀಡಿದ್ದಾರೆ.
ಈ ಹಿಂದೆ ತಂಡದ ನಾಯಕರಾಗಿದ್ದ ಫಾಫ್ ಡು ಪ್ಲೆಸಿಸ್ ರನ್ನೇ ತಂಡದಿಂದ ಕೈಬಿಡಲಾಗಿದ್ದು, ಇದೀಗ ಆರ್ ಸಿಬಿ ನಾಯಕನ ಸ್ಥಾನ ಖಾಲಿಯಾಗಿದೆ. ಹೀಗಾಗಿ ಅಭಿಮಾನಿಗಳು ವಿರಾಟ್ ಕೊಹ್ಲಿಯನ್ನೇ ಮತ್ತೆ ಆರ್ ಸಿಬಿ ತಂಡದ ನಾಯಕನಾಗಿ ಮಾಡುತ್ತಾರೆ ಎಂದು ಲೆಕ್ಕಾಚಾರ ಹಾಕಿದ್ದರು.
ಆದರೆ ಇದೀಗ ಕೋಟ್ಯಂತರ ಅಭಿಮಾನಿಗಳ ಆಸೆಗೆ ಫ್ರಾಂಚೈಸಿ ತಣ್ಣೀರೆರಚಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರ್‌ಸಿಬಿಯ ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್, ಈ ವಿಷಯದಲ್ಲಿ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ವದಂತಿಗೇನು ಕಾರಣ?
ಆರ್ ಸಿಬಿಯ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ (Faf du Plessis) ಅವರು 2022 ರಿಂದ 2024ರ ವರೆಗೆ ಆರ್‌ಸಿಬಿ ತಂಡವನ್ನು ಮುನ್ನಡೆಸಿದ್ದರು. ಎರಡು ಬಾರಿ ಆರ್ ಸಿಬಿ ತಂಡ ಪ್ಲೇ ಆಫ್ ಹಂತ ತಲುಪಿದ್ದರೂ, ಟ್ರೋಫಿ ಗೆಲ್ಲುವಲ್ಲಿ ವಿಫಲವಾಗಿತ್ತು. ಇದರ ನಡುವೆಯೇ ಈ ಬಾರಿ ಆರ್‌ಸಿಬಿ ರಿಟೇನ್ ಆಟಗಾರರ ಪಟ್ಟಿಯಿಂದ ಡುಪ್ಲೆಸಿ ಅವರನ್ನು ತಂಡದಿಂದ ಕೈಬಿಡಲಾಗಿತ್ತು.
ಈ ಬೆಳವಣಿಗೆ ಬಳಿಕ ಮತ್ತೆ ವಿರಾಟ್ ಕೊಹ್ಲಿ ನಾಯಕತ್ವ ವಹಿಸಿಕೊಳ್ಳುತ್ತಾರೆ ಎನ್ನಲಾಗಿತ್ತು. ತಂಡದ ಮ್ಯಾನೇಜ್‌ಮೆಂಟ್ ನಾಯಕತ್ವದ ಬದಲಾವಣೆಯ ಬಗ್ಗೆ ಈಗಾಗಲೇ ಚರ್ಚಿಸಿದೆ. ನಾಯಕತ್ವದ ಸ್ಥಾನ ಅಲಂಕರಿಸಲು ಕೊಹ್ಲಿ ಉತ್ಸುಕರಾಗಿದ್ದಾರೆ ಎಂಬ ವದಂತಿ ಹರಿದಾಡಿತ್ತು.
ಇದೀಗ ಎಲ್ಲ ವದಂತಿಗಳಿಗೆ ಆರ್ ಸಿಬಿ ತಂಡ ತೆರೆ ಎಳೆದಿದೆ.
ಅಂದಹಾಗೆ ವಿರಾಟ್ ಕೊಹ್ಲಿ ಈ ಹಿಂದೆ 2013 ರಿಂದ 2021 ರವರೆಗೆ ಆರ್‌ಸಿಬಿ ನಾಯಕತ್ವ ವಹಿಸಿದ್ದರು. ತಂಡವನ್ನು ನಾಲ್ಕು ಬಾರಿ ಪ್ಲೇ ಆಫ್‌ಗೆ ತಲುಪಿಸುವಲ್ಲಿ ಶ್ರಮಿಸಿದ್ದರು. ಇದೀಗ 18ನೇ ಆವೃತ್ತಿಗೂ ಕೊಹ್ಲಿ ಆರ್‌ಸಿಬಿ ತಂಡವನ್ನೇ ಪ್ರತಿನಿಧಿಸಿದ್ದಾರೆ. ಮುಂದಿನ ಐಪಿಎಲ್‌ಗೆ ಕೊಹ್ಲಿಯನ್ನು ಫ್ರಾಂಚೈಸಿ 21 ಕೋಟಿ ರೂ.ಗಳಿಗೆ ಏರಿಕೆಯಾಗಿದೆ.
Advertisement