ಕೆಎಲ್ ರಾಹುಲ್ ಮೊಣಕೈಗೆ ಪೆಟ್ಟು, ಆಸ್ಟ್ರೇಲಿಯ ವಿರುದ್ಧದ ಮೊದಲ ಟೆಸ್ಟ್‌ಗೆ ಲಭ್ಯವಾಗುವುದು ಅನುಮಾನ

ಇಂದು ಡಬ್ಲ್ಯುಎಸಿಎ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಕೆಎಲ್ ರಾಹುಲ್ ಗೆ ಗಾಯವಾಗಿದ್ದು, ಸ್ಕ್ಯಾನ್ ಮಾಡಿಸಿಕೊಳ್ಳಲು ತೆರಳಿದ್ದಾರೆ.
KL Rahul
ಕೆಎಲ್ ರಾಹುಲ್
Updated on

ಪರ್ತ್: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಟೀಂ ಇಂಡಿಯಾ ಆಟಗಾರರು ಶುಕ್ರವಾರ ಅಭ್ಯಾಸ ನಡೆಸುತ್ತಿದ್ದಾಗ ಕೆಎಲ್ ರಾಹುಲ್ ಅವರ ಮೊಣಕೈಗೆ ಗಾಯವಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಇಂದು ಡಬ್ಲ್ಯುಎಸಿಎ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಕೆಎಲ್ ರಾಹುಲ್ ಗೆ ಗಾಯವಾಗಿದ್ದು, ಸ್ಕ್ಯಾನ್ ಮಾಡಿಸಿಕೊಳ್ಳಲು ತೆರಳಿದ್ದಾರೆ. ಹೀಗಾಗಿ ನವೆಂಬರ್ 22 ರಿಂದ ಆಸ್ಟ್ರೇಲಿಯಾ ವಿರುದ್ಧ ಇಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ಗೆ ಕೆಎಲ್ ರಾಹುಲ್, ಲಭ್ಯವಾಗುವುದು ಅನುಮಾನ ಎನ್ನಲಾಗಿದೆ.

ವೇಗಿ ಪ್ರಸಿದ್ಧ್ ಕೃಷ್ಣ ಅವರು ಕ್ಲೈಂಬಿಂಗ್ ಎಸೆತದಿಂದ ರಾಹುಲ್ ಮೊಣಕೈಗೆ ಗಾಯವಾಗಿದ್ದು, ತಕ್ಷಣವೇ ವೈದ್ಯಕೀಯ ಸಿಬ್ಬಂದಿ ಅವರಿಗೆ ಚಿಕಿತ್ಸೆ ನೀಡಿದರೂ ಅಭ್ಯಾಸ ನಡೆಸಲು ಸಾಧ್ಯವಾಗಲಿಲ್ಲ. ಹೀಗಾಗಿ ಸಹಾಯಕ ಸಿಬ್ಬಂದಿ ಅವರನ್ನು ಮೈದಾನದಿಂದ ಹೊರಗೆ ಕರೆದೊಯ್ದಿದ್ದಾರೆ.

KL Rahul
ಬ್ಯಾಟಿಂಗ್ ವೈಫಲ್ಯದ ನಡುವೆ ಖುಷಿ ಸುದ್ದಿ ಹಂಚಿಕೊಂಡ ಕೆಎಲ್ ರಾಹುಲ್!

ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಟೆಸ್ಟ್‌ನಲ್ಲಿ ನಾಯಕ ರೋಹಿತ್ ಶರ್ಮಾ ಆಡದಿದ್ದರೆ 32 ವರ್ಷದ ಕೆಎಲ್ ರಾಹುಲ್ ರಂಭಿಕರಾಗಿ ಕಣಕ್ಕಿಳಿಸಲು ತಯಾರಿ ನಡೆಸಲಾಗಿತ್ತು. ರಾಹುಲ್ ಕೂಡಾ ಮತ್ತೆ ಫಾರ್ಮ್ ಕಂಡುಕೊಳ್ಳುವ ನಿಟ್ಟಿನಿಂದ ಆಸ್ಟ್ರೇಲಿಯಾದಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದರು. ಆದರೆ ರಾಹುಲ್ ಗಾಯಗೊಂಡಿರುವುದು ಟೀಂ ಇಂಡಿಯಾ ಪಾಳಯದಲ್ಲಿ ಆತಂಕ ಮೂಡಿಸಿದೆ.

"ಕೆಎಲ್ ರಾಹುಲ್ ಅವರಿಗೆ ಈಗ ಅವರ ಮೊಣಕೈಗೆ ಗಾಯವಾಗಿದೆ. ಅದನ್ನು ಪರೀಕ್ಷಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ" ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com