ಬೆಂಗಳೂರು: ಭಾರತ ಕ್ರಿಕೆಟ್ ತಂಡದ ನಾಯಕ, ರೋಹಿತ್ ಶರ್ಮಾ ಎರಡನೇ ಮಗುವಿಗೆ ತಂದೆಯಾಗಿದ್ದಾರೆ. ರೋಹಿತ್ ಪತ್ನಿ ರಿತಿಕಾ ಸಜ್ದೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ವರದಿಯಾಗಿದೆ. ರೋಹಿತ್ ಶರ್ಮಾ ಅವರ ಮಗುವಿನ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ರೋಹಿತ್ ಕುಟುಂಬದ ಆಪ್ತರು ಶುಕ್ರವಾರ (ನವೆಂಬರ್ 15) ಗಂಡು ಮಗು ಜನಿಸಿದೆ ಎಂದು ಖಚಿತ ಮಾಹಿತಿ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರೋಹಿತ್ ಮತ್ತು ರಿತಿಕಾ 2015ರಲ್ಲಿ ಮದುವೆಯಾದರು. 2018ರ ಡಿಸೆಂಬರ್ ನಲ್ಲಿ ಸಮೀರ ಎಂಬ ಹೆಣ್ಣು ಮಗು ಜನಿಸಿದೆ. ರೋಹಿತ್ ಮತ್ತು ರಿತಿಕಾ ಪ್ರೇಮಕಥೆ ತುಂಬಾ ಆಸಕ್ತಿದಾಯಕವಾಗಿದೆ. ರಿತಿಕಾ ಮೊದಲು ರೋಹಿತ್ ಅವರ ಮ್ಯಾನೇಜರ್ ಆಗಿದ್ದರು. ನಂತರ ಇಬ್ಬರೂ ಸ್ನೇಹಿತರಾಗಿ ಪ್ರೀತಿಯಲ್ಲಿ ಬಿದ್ದಿದ್ದರು. ಕೊನೆಗೆ ಇಬ್ಬರು ಮದುವೆಯಾದರು.
ಮುಂಬರುವ ಆಸ್ಟ್ರೇಲಿಯ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಟೆಸ್ಟ್ ನವೆಂಬರ್ 22 ರಂದು ಪರ್ತ್‌ನಲ್ಲಿ ಆರಂಭವಾಗಲಿದೆ.
Advertisement