ವಂಚನೆ ಪ್ರಕರಣ: ಗೌತಮ್ ಗಂಭೀರ್‌ ದೋಷಮುಕ್ತ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ!

ಮನೆ ಖರೀದಿದಾರರಿಗೆ ವಂಚನೆ ಪ್ರಕರಣದಲ್ಲಿ ದೋಷಮುಕ್ತಗೊಳಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದ ಸೆಷನ್ಸ್ ನ್ಯಾಯಾಲಯದ ತೀರ್ಪಿನ ವಿರುದ್ಧ ಗಂಭೀರ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.
Gautam Gambhir
ಗೌತಮ್ ಗಂಭೀರ್PTI
Updated on

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಸಂಕಷ್ಟಗಳು ಕೊನೆಗೊಳ್ಳುತ್ತಿಲ್ಲ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮತ್ತು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ಕಳೆದುಕೊಂಡ ನಂತರ ಅವರು ಟೀಕೆಗಳನ್ನು ಎದುರಿಸುತ್ತಿದ್ದಾರೆ. ಇದೀಗ ದೆಹಲಿ ಹೈಕೋರ್ಟ್‌ನ ಆದೇಶ ಅವರ ಸಂಕಷ್ಟವನ್ನು ಹೆಚ್ಚಿಸಿದೆ. ವಾಸ್ತವವಾಗಿ, ಮನೆ ಖರೀದಿದಾರರಿಗೆ ವಂಚನೆ ಪ್ರಕರಣದಲ್ಲಿ ದೋಷಮುಕ್ತಗೊಳಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದ ಸೆಷನ್ಸ್ ನ್ಯಾಯಾಲಯದ ತೀರ್ಪಿನ ವಿರುದ್ಧ ಗಂಭೀರ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಪ್ರಕರಣ ಸಂಬಂಧ ದೆಹಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ನ್ಯಾಯಮೂರ್ತಿ ಮನೋಜ್ ಕುಮಾರ್ ಓಹ್ರಿ ಮಧ್ಯಂತರ ಆದೇಶ ನೀಡಿದ್ದು, ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಗಂಭೀರ್ ಸಲ್ಲಿಸಿದ ಮನವಿಗೆ ದೆಹಲಿ ಸರ್ಕಾರದ ಪ್ರತಿಕ್ರಿಯೆ ಕೇಳಿದ್ದು ನಂತರ ವಿವರವಾದ ಆದೇಶವನ್ನು ಘೋಷಿಸಲಾಗುವುದು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಅಕ್ಟೋಬರ್ 29ರಂದು ತನ್ನ ಆದೇಶದಲ್ಲಿ, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ತೀರ್ಪು ಗಂಭೀರ್ ವಿರುದ್ಧದ ಆರೋಪಗಳನ್ನು ನಿರ್ಧರಿಸುವಲ್ಲಿ ಅಸಮರ್ಪಕ ಮನಸ್ಸಿನ ಅಭಿವ್ಯಕ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಸೆಷನ್ಸ್ ಕೋರ್ಟ್ ಹೇಳಿತ್ತು. 'ಆರೋಪಗಳಲ್ಲಿ ಗೌತಮ್ ಗಂಭೀರ್ ಪಾತ್ರದ ಬಗ್ಗೆಯೂ ಹೆಚ್ಚಿನ ತನಿಖೆ ನಡೆಸಬೇಕು' ಎಂದು ಅದು ಹೇಳಿತ್ತು. ಸೆಷನ್ಸ್ ನ್ಯಾಯಾಲಯವು ಪ್ರಕರಣವನ್ನು ಮತ್ತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಕಳುಹಿಸಿದ್ದು ವಿವರವಾದ ಹೊಸ ಆದೇಶವನ್ನು ರವಾನಿಸಲು ಸೂಚಿಸಿತ್ತು.

Gautam Gambhir
ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಶಮಿ ವಿರುದ್ಧ ಗಂಭೀರ ಆರೋಪ: ಬ್ಯಾನ್ ಆಗ್ತಾರಾ ಟೀಂ ಇಂಡಿಯಾ ವೇಗಿ?

ಫ್ಲಾಟ್ ಖರೀದಿದಾರರು ರಿಯಲ್ ಎಸ್ಟೇಟ್ ಸಂಸ್ಥೆಗಳಾದ ರುದ್ರಾ ಬಿಲ್ಡ್‌ವೆಲ್ ರಿಯಾಲ್ಟಿ ಪ್ರೈವೇಟ್ ಲಿಮಿಟೆಡ್, ಎಚ್‌ಆರ್ ಇನ್‌ಫ್ರಾಸಿಟಿ ಪ್ರೈವೇಟ್ ಲಿಮಿಟೆಡ್, ಯುಎಂ ಆರ್ಕಿಟೆಕ್ಚರ್ ಮತ್ತು ಕಾಂಟ್ರಾಕ್ಟರ್ಸ್ ಲಿಮಿಟೆಡ್ ಮತ್ತು ಗೌತಮ್ ಗಂಭೀರ್ ವಿರುದ್ಧ ವಂಚನೆ ಪ್ರಕರಣವನ್ನು ದಾಖಲಿಸಿದ್ದಾರೆ. ಈ ಎಲ್ಲಾ ಕಂಪನಿಗಳ ಜಂಟಿ ಉದ್ಯಮದಲ್ಲಿ ಗಂಭೀರ್ ನಿರ್ದೇಶಕ ಮತ್ತು ಬ್ರಾಂಡ್ ಅಂಬಾಸಿಡರ್ ಆಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗಾನೆ ಅವರು, ಬ್ರಾಂಡ್ ಅಂಬಾಸಿಡರ್ ಆಗಿ ಹೂಡಿಕೆದಾರರೊಂದಿಗೆ ನೇರ ಸಂಪರ್ಕ ಹೊಂದಿದ್ದ ಏಕೈಕ ಆರೋಪಿ ಅದು ಗಂಭೀರ್ ಎಂಬುದನ್ನು ಗಮನಿಸಿದ್ದರು. ವಂಚನೆಯ ಮೊತ್ತದ ಯಾವುದೇ ಭಾಗ ಗಂಭೀರ್ ಕೈಗೆ ಬಂದಿದೆಯೇ ಅಥವಾ ಇಲ್ಲವೇ ಎಂಬುದನ್ನು ಆರೋಪಪಟ್ಟಿಯಲ್ಲಿ ಸ್ಪಷ್ಟಪಡಿಸಿಲ್ಲ. ಇದರ ಹೊರತಾಗಿಯೂ ಅವರನ್ನು ದೋಷಮುಕ್ತಗೊಳಿಸಲಾಯಿತು. ಇದಕ್ಕಾಗಿಯೇ ಸೆಷನ್ಸ್ ನ್ಯಾಯಾಲಯವು ಕೆಳ ನ್ಯಾಯಾಲಯದ ಹಿಂದಿನ ತೀರ್ಪನ್ನು ರದ್ದುಗೊಳಿಸಿ ತನಿಖೆಗೆ ಆದೇಶಿಸಿತ್ತು. ಗಂಭೀರ್ ಬ್ರಾಂಡ್ ಅಂಬಾಸಿಡರ್ ಆಗಿರುವಾಗಲೇ ಹಣದ ವಹಿವಾಟು ನಡೆದಿರುವುದನ್ನು ನ್ಯಾಯಾಲಯ ಗುರುತಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com