ಪರ್ತ್: ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ನಿರ್ಣಾಯಕ ಘಟ್ಟ ತಲುಪಿದ್ದು, ಭಾರತದ ಬೃಹತ್ ಮೊತ್ತದಲ್ಲಿ ಮಹತ್ತರ ಪಾತ್ರವಹಿಸಿದ ವಿರಾಟ್ ಕೊಹ್ಲಿ ಶತಕದ ಮೂಲಕ ಭಾರತದ ಕ್ರಿಕೆಟ್ ಲೆಜೆಂಡ್ ಸುನಿಲ್ ಗವಾಸ್ಕರ್ ರ ದಾಖಲೆಯೊಂದನ್ನು ಧೂಳಿಪಟ ಮಾಡಿದ್ದಾರೆ.
ಹೌದು.. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಭರ್ಜರಿ ಬ್ಯಾಟ್ ಬೀಸಿದ ವಿರಾಟ್ ಕೊಹ್ಲಿ ಕೇವಲ 143 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 8 ಬೌಂಡರಿಗಳ ನೆರವಿನಿಂದ ಅಜೇಯ 100 ಗಳಿಸಿದರು. ಆ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ 30ನೇ ಶತಕ ಮತ್ತು ಒಟ್ಟಾರೆ 80ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿದರು.
ಈ ಶತಕದ ಮೂಲಕ ಕೊಹ್ಲಿ ಭಾರತದ ಕ್ರಿಕೆಟ್ ಲೆಜೆಂಡ್ ಸುನಿಲ್ ಗವಾಸ್ಕರ್ ರ ದಾಖಲೆಯೊಂದನ್ನು ಹಿಂದಿಕ್ಕಿದ್ದು, ಒಂದೇ ಎದುರಾಳಿ ತಂಡದ ವಿರುದ್ಧ ಆತೀ ಹೆಚ್ಚು ಶತಕ ಸಿಡಿಸಿದ ಭಾರತದ ಜಂಟಿ 2ನೇ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಕೊಹ್ಲಿಗೆ ಇದು ಆಸ್ಟ್ರೇಲಿಯಾ ವಿರುದ್ಧ 9ನೇ ಶತಕವಾಗಿದ್ದು, ಆ ಮೂಲಕ ಕೊಹ್ಲಿ ಇದೇ ಆಸ್ಟ್ರೇಲಿಯಾ ತಂಡದ ವಿರುದ್ಧ 8 ಶತಕ ಸಿಡಿಸಿದ್ದ ಗವಾಸ್ಕರ್ ದಾಖಲೆಯನ್ನು ಹಿಂದಿಕ್ಕಿದ್ದಾರೆ.
Most Test hundreds against an opponent for India
13 - Sunil Gavaskar vs West Indies
11 - Sachin Tendulkar vs Australia
9 - Sachin Tendulkar vs Sri Lanka
9 - Virat Kohli vs Australia
8 - Sunil Gavaskar vs Australia
ಇನ್ನು ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 13 ಶತಕ ಸಿಡಿಸಿದ ಸುನಿಲ್ ಗವಾಸ್ಕರ್ ಅಗ್ರಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ ವಿರುದ್ಧ 11 ಶತಕ ಸಿಡಿಸಿರುವ ಸಚಿನ್ ತೆಂಡೂಲ್ಕರ್ 2ನೇ ಸ್ಥಾನದಲ್ಲಿದ್ದಾರೆ. ಇನ್ನು ಶ್ರೀಲಂಕಾ ವಿರುದ್ಧ 9 ಶತಕ ಸಿಡಿಸಿರುವ ಸಚಿನ್ ಮತ್ತು ಆಸ್ಟ್ರೇಲಿಯಾ ವಿರುದ್ಧ 9 ಶತಕ ಸಿಡಿಸಿರುವ ಕೊಹ್ಲಿ ಜಂಟಿ 2ನೇ ಸ್ಥಾನದಲ್ಲಿದ್ದಾರೆ.
Advertisement