ಪರ್ತ್: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಭಾರತ 487 ರನ್ ಗೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದು, ಪ್ಯಾಟ್ ಕಮಿನ್ಸ್ ಪಡೆಗೆ ಗೆಲ್ಲಲು 533 ರನ್ ಬೃಹತ್ ಗುರಿ ನೀಡಿದೆ.
2ನೇ ಇನ್ನಿಂಗ್ಸ್ ನಲ್ಲಿ ಭಾರತ ಭರ್ಜರಿ ಬ್ಯಾಟಿಂಗ್ ಮಾಡಿದ್ದು 6 ವಿಕೆಟ್ ನಷ್ಟಕ್ಕೆ 487 ರನ್ ಕಲೆ ಹಾಕಿತು. ಭಾರತದ ಪರ ಯಶಸ್ವಿ ಜೈಸ್ವಾಲ್ 161, ಕೆಎಲ್ ರಾಹುಲ್ 77, ದೇವದತ್ ಪಡಿಕ್ಕಲ್ 25, ವಾಷಿಂಗ್ಟನ್ ಸುಂದರ್ 29, ನಿತೀಶ್ ರೆಡ್ಡಿ ಅಜೇಯ 38 ರನ್ ಮತ್ತು ವಿರಾಟ್ ಕೊಹ್ಲಿ ಅಜೇಯ 100 ರನ್ ಗಳಿಸಿದರು.
ಕೊಹ್ಲಿ ಶತಕ ಸಿಡಿಸುತ್ತಿದ್ದಂತೆಯೇ ಭಾರತ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಆಸ್ಟ್ರೇಲಿಯಾ ಪರ ನಾಥನ್ ಲೈಆನ್ 2 ವಿಕೆಟ್, ಮಿಚ್ ಮಾರ್ಶ್, ಕಮಿನ್ಸ್, ಹೇಜಲ್ವುಡ್ ಮತ್ತು ಮಿಚೆಲ್ ಸ್ಟಾರ್ಕ್ ತಲಾ 1 ವಿಕೆಟ್ ಪಡೆದರು. ಅಂತಿಮವಾಗಿ ಭಾರತ 487 ರನ್ ಗೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದು, ಆಸ್ಟ್ರೇಲಿಯಾಗೆ ಗೆಲ್ಲಲು 533 ರನ್ ಬೃಹತ್ ಗುರಿ ನೀಡಿದೆ.
Advertisement