ಪರ್ತ್: ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ನಿರ್ಣಾಯಕ ಘಟ್ಟ ತಲುಪಿದೆ.
ಭಾರತ ನೀಡಿದ ಬೃಹತ್ ಗುರಿಯನ್ನು ಬೆನ್ನು ಹತ್ತಿರುವ ಆಸ್ಟ್ರೇಲಿಯಾ ತಂಡ 2ನೇ ಇನ್ನಿಂಗ್ಸ್ ಆರಂಭದಲ್ಲೇ ಮರ್ಮಾಘಾತ ಅನುಭವಿಸಿದೆ.
ಭಾರತ ನೀಡಿದ 533 ರನ್ ಬೃಹತ್ ಗುರಿಯನ್ನು ಬೆನ್ನು ಹತ್ತಿರುವ ಆಸ್ಟ್ರೇಲಿಯಾ ತಂಡ ಕೇವಲ 12 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಭಾರತದ ಪರ ಮತ್ತೆ ಭರ್ಜರಿ ಬೌಲಿಂಗ್ ಮಾಡಿದ ಜಸ್ ಪ್ರೀತ್ ಬುಮ್ರಾ ಮತ್ತು ಮಹಮದ್ ಸಿರಾಜ್ ಆಸ್ಟ್ರೇಲಿಯಾದ ಮೂರು ವಿಕೆಟ್ ಕಬಳಿಸಿದ್ದಾರೆ. ಬುಮ್ರಾ ನಾಥನ್ ಮೆಕ್‌ಸ್ವೀನಿ ಮತ್ತು ಮಾರ್ನಸ್ ಲ್ಯಾಬುಸ್ಚಾಗ್ನೆ ವಿಕೆಟ್ ಪಡೆದರೆ, ಮಹಮದ್ ಸಿರಾಜ್ ಪ್ಯಾಟ್ ಕಮಿನ್ಸ್ ವಿಕೆಟ್ ಪಡೆದರು.
ಈ ಮೂಲಕ ಭಾರತ ಮೊದಲ ಪಂದ್ಯದ ಗೆಲುವಿನ ಭರವಸೆ ಮೂಡಿಸಿದ್ದು, ಭಾರತ ಗೆಲ್ಲಲು ಇನ್ನು 7 ವಿಕೆಟ್ ಪಡೆಯಬೇಕಿದೆ. ಅಂತೆಯೇ ಆಸ್ಟ್ರೇಲಿಯಾ ಗೆಲ್ಲಲು ಇನ್ನೂ 522 ರನ್ ಗಳಿಸಬೇಕಿದೆ.
Advertisement