
ಪರ್ತ್: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಸ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸುತ್ತಿರುವ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದಾರೆ.
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಹೊಸ ಮೈಲುಗಲ್ಲು ಸಾಧಿಸಿದ್ದು, ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ.
ದ್ವಿತೀಯ ಇನಿಂಗ್ಸ್ನಲ್ಲಿ ವಿರಾಟ್ ಕೊಹ್ಲಿ 94 ಎಸೆತಗಳಲ್ಲಿ 52* ರನ್ ಗಳಿಸಿ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ 2000 ರನ್ ಗಳಿಸಿದ ಸಾಧನೆ ಮಾಡಿದ್ದಾರೆ.
ಆ ಮೂಲಕ ವಿರಾಟ್ ಕೊಹ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2 ಸಾವಿರ ರನ್ ಪೂರೈಸಿದ ಭಾರತದ 5ನೇ ಬ್ಯಾಟರ್ ಎನಿಸಿಕೊಂಡರು. ಹಾಗೆಯೇ ಈ ಸಾಧನೆ ಮಾಡಿದ 7ನೇ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು.
ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ (3262), ರಿಕಿ ಪಾಂಟಿಂಗ್ (2555), ವಿವಿಎಸ್ ಲಕ್ಷ್ಮಣ್ (2434), ರಾಹುಲ್ ದ್ರಾವಿಡ್ (2143), ಮೈಕೆಲ್ ಕ್ಲಾರ್ಕ್ (2049) ಮತ್ತು ಚೇತೇಶ್ವರ ಪೂಜಾರ (2033) ಮಾತ್ರ ಈ ಸಾಧನೆ ಮಾಡಿದ್ದರು.
ಇದೀಗ 44 ಇನಿಂಗ್ಸ್ಗಳ ಮೂಲಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 2000* ರನ್ ಪೂರೈಸಿದ್ದಾರೆ. ಈ ಮೂಲಕ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2 ಸಾವಿರ ರನ್ಗಳ ಮೈಲುಗಲ್ಲು ದಾಟಿದ 7ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಆಸ್ಟ್ರೇಲಿಯಾ ವಿರುದ್ಧದ 34 ಟೆಸ್ಟ್ ಪಂದ್ಯಗಳಲ್ಲಿ 65 ಇನಿಂಗ್ಸ್ ಆಡಿರುವ ಸಚಿನ್ ಒಟ್ಟು 3262 ರನ್ ಕಲೆಹಾಕಿದ್ದಾರೆ.
Advertisement