
ಬೆಂಗಳೂರು: ನಿರ್ಣಾಯಕ ಹಂತದಲ್ಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಆರಂಭಿಕ ಆಘಾತ ಎದುರಿಸಿದ್ದು, ಆರಂಭಿಕ ಆಟಗಾರ ಟಾಮ್ ಲಾಥಮ್ ವಿಕೆಟ್ ಕಳೆದುಕೊಂಡಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಪಂದ್ಯದ ಅಂತಿಮ ದಿನ ಭಾರತ ನೀಡಿರುವ 107 ರನ್ ಗಳ ಅಲ್ಪಮೊತ್ತದ ಗುರಿಯನ್ನು ಬೆನ್ನು ಹತ್ತಿರುವ ನ್ಯೂಜಿಲೆಂಡ್ ತಂಡ ತನ್ನ ಮೊದಲ ಓವರ್ ನಲ್ಲೇ ಟಾಮ್ ಲಾಥಮ್ ವಿಕೆಟ್ ಕಳೆದುಕೊಂಡಿದೆ.
ಭಾರತದ ವೇಗಿ ಜಸ್ ಪ್ರೀತ್ ಬುಮ್ರಾ ಕಿವೀಸ್ ಗೆ ಮೊದಲ ಆಘಾತ ನೀಡಿದ್ದು, ಟಾಮ್ ಲಾಥಮ್ ರನ್ನು ಎಲ್ ಬಿ ಬಲೆಗೆ ಕೆಡವಿದರು.
ಇನ್ನು ಇತ್ತೀಚಿನ ವರದಿಗಳು ಬಂದಾಗ ನ್ಯೂಜಿಲೆಂಡ್ ತಂಡ 1 ವಿಕೆಟ್ ನಷ್ಟಕ್ಕೆ 8 ರನ್ ಗಳಿಸಿದ್ದು, ಗೆಲ್ಲಲು ಇನ್ನೂ 99 ರನ್ ಗಳನ್ನು ಗಳಿಸಬೇಕಿದೆ.
Advertisement