1st test: ನ್ಯೂಜಿಲೆಂಡ್ ಗೆ ಐತಿಹಾಸಿಕ ಗೆಲುವು, 36 ವರ್ಷಗಳ ಬಳಿಕ ಭಾರತದಲ್ಲಿ ಮೊದಲ ಜಯ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭಾರತದ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, ಇದು 36 ವರ್ಷಗಳ ಬಳಿಕ ಭಾರತದಲ್ಲಿ ನ್ಯೂಜಿಲೆಂಡ್ ಗೆ ಸಿಕ್ಕ ಮೊದಲ ಜಯವಾಗಿದೆ.
first Test win for New Zealand after 36 years in India
ನ್ಯೂಜಿಲೆಂಡ್ ಗೆ ಭರ್ಜರಿ ಜಯ
Updated on

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್ ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಇಂದು ನ್ಯೂಜಿಲೆಂಡ್ ಐತಿಹಾಸಿಕ ಜಯಕ್ಕೆ ಸಾಕ್ಷಿಯಾಗಿದೆ.

ಹೌದು.. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭಾರತದ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, ಇದು 36 ವರ್ಷಗಳ ಬಳಿಕ ಭಾರತದಲ್ಲಿ ನ್ಯೂಜಿಲೆಂಡ್ ಗೆ ಸಿಕ್ಕ ಮೊದಲ ಜಯವಾಗಿದೆ. 1988ರಲ್ಲಿ ಕೊನೆಯ ಬಾರಿಗೆ ನ್ಯೂಜಿಲೆಂಡ್ ಭಾರತದಲ್ಲಿ ತನ್ನ ಕೊನೆಯ ಟೆಸ್ಟ್ ಪಂದ್ಯ ಗೆದ್ದಿತ್ತು.

ಅಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭಾರತವನ್ನು 136ರನ್ ಗಳಿಂದ ಮಣಿಸಿತ್ತು. ಇದಕ್ಕೂ ಮೊದಲು 1969ರಲ್ಲಿ ನಾಗ್ಪುರದಲ್ಲಿ ನಡೆದ ಟೆಸ್ಟ್ ನಲ್ಲಿ ಇದೇ ನ್ಯೂಜಿಲೆಂಡ್ ತಂಡ 167ರನ್ ಅಂತರದಲ್ಲಿ ಗೆದ್ದು ಬೀಗಿತ್ತು. ಇದೀಗ ಬೆಂಗಳೂರಿನಲ್ಲಿ ಟೆಸ್ಟ್ ಪಂದ್ಯ ಗೆದ್ದು ದಾಖಲೆ ಬರೆದಿದೆ.

This is the first Test win for New Zealand in India since 1988 (after 36 years) and just the third win in 37 Test matches on India soil, Instances:

  • Win by 167 runs, Nagpur, 1969

  • Win by 136 runs, Wankhede, 1988

  • Win by 8 wickets, Bengaluru, 2024*

first Test win for New Zealand after 36 years in India
1st test: ಭಾರತದ ವಿರುದ್ಧ ನ್ಯೂಜಿಲೆಂಡ್ ಗೆ 8 ವಿಕೆಟ್ ಭರ್ಜರಿ ಜಯ

ಅಂತೆಯೇ 2000ದ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿ ತಂಡವೊಂದು 100ಕ್ಕೂ ಅಧಿಕ ರನ್ ಚೇಸ್ ಮಾಡಿ ಭಾರತ ತಂಡವನ್ನು ಸೋಲಿಸಿದ್ದು, ಈ ಕೀರ್ತಿಗೆ ಇದೀಗ ನ್ಯೂಜಿಲೆಂಡ್ ಭಾಜನವಾಗಿದೆ.

This is the first time since 2000 a visiting team has successfully chased a 100+ target in the fourth innings in India

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com