
ಬೆಂಗಳೂರು: ನಿರೀಕ್ಷೆಯಂತೆಯೇ ಪ್ರವಾಸಿ ನ್ಯೂಜಿಲೆಂಡ್ ತಂಡ ಭಾರತದ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದ್ದು, 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ನೀಡಿದ್ದ 107 ರನ್ ಗಳ ಸಾಧಾರಣ ಗುರಿಯನ್ನು ನ್ಯೂಜಿಲೆಂಡ್ ತಂಡ ಕೇವಲ 2 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿದೆ.
ನ್ಯೂಜಿಲೆಂಡ್ ತಂಡ ಆರಂಭಿಕ ಆಘಾತದ ಹೊರತಾಗಿಯೂ ರಕ್ಷಣಾತ್ಮಕ ಆಟ ಪ್ರದರ್ಶಿಸಿತು. ಆರಂಭಿಕ ಆಟಗಾರ ಟಾಮ್ ಲಾಥಮ್ ಶ್ಯೂನ್ಯಕ್ಕೆ ಔಟಾದರೆ, ಡೆವಾನ್ ಕಾನ್ವೆ 17 ರನ್ ಗಳಿಸಿ ಜಸ್ ಪ್ರೀತ್ ಬುಮ್ರಾ ಗೆ ವಿಕೆಟ್ ಒಪ್ಪಿಸಿದರು.
ಬಳಿಕ ಬಂದ ವಿವ್ ಯಂಗ್ (ಅಜೇಯ 45 ರನ್) ಮತ್ತು ರಚಿನ್ ರವೀಂದ್ರ (ಅಜೇಯ 39 ರನ್) ಮತ್ತಾವುದೇ ಅಪಾಯಕ್ಕೆ ಎಡೆ ಮಾಡಿಕೊಡದೆ ಗೆಲುವಿನ ಔಪಚಾರಕತೆ ಪೂರ್ಣಮಾಡಿದರು.
ಭಾರತದ ಪರ ಜಸ್ ಪ್ರೀತ್ ಬುಮ್ರಾ 2 ವಿಕೆಟ್ ಪಡೆದರು.
Advertisement