ಪುಣೆ: ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಭಾರತ 1 ವಿಕೆಟ್ ಕಳೆದುಕೊಂಡು 16 ರನ್ ಗಳಿಸಿದ್ದು ಇನ್ನೂ 243 ರನ್ ಹಿನ್ನಡೆಯಲ್ಲಿದೆ.
ಮೊದಲ ಇನ್ನಿಂಗ್ಸ್ ನಲ್ಲಿ ನ್ಯೂಜಿಲೆಂಡ್ 259 ರನ್ ಗಳಿಗೆ ಆಲೌಟ್ ಆಗಿದ್ದು, ಇದಕ್ಕೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಭಾರತ ತಂಡ 1 ವಿಕೆಟ್ ನಷ್ಟಕ್ಕೆ 16 ರನ್ ಗಳಿಸಿದೆ. ಭಾರತದ ಪರ 10 ರನ್ ಗಳಿಸಿರುವ ಶುಭ್ ಮನ್ ಗಿಲ್ ಮತ್ತು 6 ರನ್ ಗಳಿಸಿರುವ ಯಶಸ್ವಿ ಜೈಸ್ವಾಲ್ 2ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಮತ್ತೆ ಶೂನ್ಯಕ್ಕೆ ರೋಹಿತ್ ಶರ್ಮಾ ಔಟ್
ಇನ್ನು ಇಂದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದಾರೆ. ಟಿಮ್ ಸೌಥಿ ಬೌಲಿಂಗ್ ನಲ್ಲಿ ರೋಹಿತ್ ಶರ್ಮಾ ಕ್ಲೀನ್ ಬೌಲ್ಡ್ ಆಗಿದ್ದು ಆ ಮೂಲಕ ಮತ್ತೆ ಕಳಪೆ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದಾರೆ.
ನ್ಯೂಜಿಲೆಂಡ್ ಪರ ಟಿಮ್ ಸೌಥಿ 1 ವಿಕೆಟ್ ಪಡೆದಿದ್ದಾರೆ.
Advertisement