
ಬೆಂಗಳೂರು: ಮೈಸೂರು ವಾರಿಯರ್ಸ್ ಮತ್ತು ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ನಡೆದ Maharaja Trophy 2024 ಫೈನಲ್ ಪಂದ್ಯದಲ್ಲಿ ಮೈಸೂರು ತಂಡ ಜಯಭೇರಿ ಭಾರಿಸಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಮೈಸೂರು ತಂಡ, ಬೆಂಗಳೂರು ತಂಡವನ್ನು 45 ರನ್ಗಳಿಂದ ಮಣಿಸಿ ಮೊದಲ ಬಾರಿಗೆ ಮಹಾರಾಜ ಟ್ರೋಫಿಯನ್ನು ಎತ್ತಿಹಿಡಿದಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮೈಸೂರು ತಂಡ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 207 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಬೆಂಗಳೂರು ತಂಡ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 162 ರನ್ ಕಲೆಹಾಕಲಷ್ಟೆ ಶಕ್ತವಾಯಿತು.
ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕ ಮಯಾಂಕ್ ಅಗರ್ವಾಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಕರುಣ್ ನಾಯರ್ ನಾಯಕತ್ವದ ಮೈಸೂರು ತಂಡ ನಿಗಧಿತ 20 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್ ಕಲೆಹಾಕಿತು. ಮೈಸೂರು ಪರ ಕಾರ್ತಿಕ್ 71 ರನ್ ಗಳಿಸಿದರೆ, ನಾಯಕ ಕರುಣ್ ನಾಯರ್ 66 ರನ್ ಗಳಿಸಿದರು. ಎಂ ಎಸ್ ಭಾಂಡಗೆ 44ರನ್ ಗಳಿಸಿ ಮೈಸೂರು ತಂಡ ಸ್ಕೋರ್ 200ರ ಗಡಿ ದಾಟುವಂತೆ ನೋಡಿಕೊಂಡರು. ಅಂತಿಮವಾಗಿ ಮೈಸೂರು ತಂಡ 20 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್ ಕಲೆಹಾಕಿತು.
ಬೃಹತ್ ಗುರಿಯನ್ನು ಬೆನ್ನು ಹತ್ತಿದ ಬೆಂಗಳೂರು ತಂಡ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಬೆಂಗಳೂರು ಪರ ಚೇತನಾ ಎಲ್ ಆರ್ 51 ರನ್ ಗಳಿಸಿದರೆ, ಕ್ರಾಂತಿಕುಮಾರ್ 39 ರನ್ ಗಳಿಸಿದರು. ಮೈಸೂರು ಪರ ವಿದ್ಯಾಧರ್ ಪಾಟೀಲ್ 3 ವಿಕೆಟ್ ಪಡೆದರೆ, ಕಾರ್ತಿಕ್, ಧನುಷ್ ಗೌಡ, ಕೆ ಗೌತಮ್ ಮತ್ತು ಕಾರ್ತಿಕ್ ಎಸ್ ಯು ತಲಾ ಒಂದು ವಿಕೆಟ್ ಪಡೆದರು.
Advertisement