IND vs BAN: ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಪ್ರಕಟ, ಕೆಎಲ್ ರಾಹುಲ್, ರಿಷಬ್ ಪಂತ್‌ ಗೆ ಸ್ಥಾನ!

ಭಾರತ ತಂಡಕ್ಕೆ ಕೆಎಲ್ ರಾಹುಲ್, ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರನ್ನು ಮೊದಲ ಟೆಸ್ಟ್‌ಗೆ ಸೇರಿಸಿಕೊಳ್ಳಲಾಗಿದೆ. ಕಾರು ಅಪಘಾತದ ನಂತರ ಪಂತ್ ಮೊದಲ ಬಾರಿಗೆ ಟೀಂ ಇಂಡಿಯಾ ಪರ ಟೆಸ್ಟ್ ಆಡಲಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ. ಏತನ್ಮಧ್ಯೆ, ಬಿಸಿಸಿಐ ಭಾನುವಾರ ಚೆನ್ನೈನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಿದೆ.

ಭಾರತ ತಂಡಕ್ಕೆ ಕೆಎಲ್ ರಾಹುಲ್, ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರನ್ನು ಮೊದಲ ಟೆಸ್ಟ್‌ಗೆ ಸೇರಿಸಿಕೊಳ್ಳಲಾಗಿದೆ. ಕಾರು ಅಪಘಾತದ ನಂತರ ಪಂತ್ ಮೊದಲ ಬಾರಿಗೆ ಟೀಂ ಇಂಡಿಯಾ ಪರ ಟೆಸ್ಟ್ ಆಡಲಿದ್ದಾರೆ. ರಿಷಬ್ ಪಂತ್ 15 ತಿಂಗಳ ಕಾರು ಅಪಘಾತದ ನಂತರ ಕ್ರಿಕೆಟ್‌ಗೆ ಮರಳಿದರು. ಪಂತ್ ಟೀಮ್ ಇಂಡಿಯಾದ ಟಿ20 ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು. ಇದಾದ ಬಳಿಕ 26ರ ಹರೆಯದ ಈ ವಿಕೆಟ್ ಕೀಪರ್ ಕಳೆದ ತಿಂಗಳು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲೂ ಪಾಲ್ಗೊಂಡಿದ್ದರು.

ಭಾರತ ತಂಡದ ಯುವ ಎಡಗೈ ವೇಗಿ ಯಶ್ ದಯಾಲ್ ಅವರಿಗೆ ಭಾರತ ಟೆಸ್ಟ್ ತಂಡದಿಂದ ಚೊಚ್ಚಲ ಕರೆ ಬಂದಿದೆ. ಅವರು ಬಾಂಗ್ಲಾದೇಶ ವಿರುದ್ಧ ಟೀಮ್ ಇಂಡಿಯಾದ ಭಾಗವಾಗಲಿದ್ದಾರೆ. 26 ವರ್ಷದ ಯಶ್ ದಯಾಳ್ 24 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, 76 ವಿಕೆಟ್ ಪಡೆದಿದ್ದಾರೆ. ಯಶ್ ಗೂ ಐಪಿಎಲ್ ಅನುಭವವಿದೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡಿದ 28 ಪಂದ್ಯಗಳಲ್ಲಿ 28 ವಿಕೆಟ್ ಪಡೆದಿದ್ದಾರೆ.

ಸಂಗ್ರಹ ಚಿತ್ರ
Moeen Ali: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್‌ ನ ಆಲ್ ರೌಂಡರ್ ನಿವೃತ್ತಿ ಘೋಷಣೆ

ಭಾರತ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಟೆಸ್ಟ್ ಸರಣಿಯನ್ನು ಆಡಿತ್ತು. ಆದರೆ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಈ ಸರಣಿಯ ಭಾಗವಾಗಿರಲಿಲ್ಲ. ವೈಯಕ್ತಿಕ ಕಾರಣಗಳಿಂದ ಅವರು ಈ ಸರಣಿಯಿಂದ ತಮ್ಮ ಹೆಸರನ್ನು ಹಿಂಪಡೆದಿದ್ದರು. ಆ ದಿನಗಳಲ್ಲಿ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಗರ್ಭಿಣಿಯಾಗಿದ್ದರು. ಇದರಿಂದಾಗಿ ಇಂಗ್ಲೆಂಡ್ ವಿರುದ್ಧ ವಿರಾಟ್ ಲಭ್ಯವಾಗಲಿಲ್ಲ. ಆದರೆ, ಈಗ ಅವರು ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ಗೆ ಆಯ್ಕೆಯಾಗಿದ್ದಾರೆ. ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಟಿ20 ವಿಶ್ವಕಪ್ ನಂತರ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಆರ್ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com