Ranji trophy: ಕರ್ನಾಟಕ ರಣಜಿ ತಂಡದಲ್ಲಿ ರಾಹುಲ್ ದ್ರಾವಿಡ್ ಪುತ್ರ ಸಮಿತ್ ಗೆ ಸ್ಥಾನ!

ಇದೇ ಅಕ್ಟೋಬರ್ ನಲ್ಲಿ ಆರಂಭವಾಗಲಿರುವ Ranji trophy ಟೂರ್ನಿಗೆ ಕರ್ನಾಟಕ ತಂಡದ ಸಂಭವನೀಯ ಆಟಗಾರರ ಪಟ್ಟಿ ಬಿಡುಗಡೆಯಾಗಿದೆ.
Samit Dravid
ಸಮಿತ್ ದ್ರಾವಿಡ್
Updated on

ಬೆಂಗಳೂರು: ಇದೇ ಅಕ್ಟೋಬರ್ ನಲ್ಲಿ ಆರಂಭವಾಗಲಿರುವ Ranji trophy ಟೂರ್ನಿಗೆ ಕರ್ನಾಟಕ ತಂಡದ ಸಂಭವನೀಯ ಆಟಗಾರರ ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಸ್ಥಾನ ಪಡೆದಿದ್ದಾರೆ.

ಅಕ್ಟೋಬರ್ 11 ರಿಂದ ಶುರುವಾಗಲಿರುವ ರಣಜಿ ಟ್ರೋಫಿಗಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಂಭವನೀಯ ಆಟಗಾರರ ಪಟ್ಟಿಯನ್ನು ಪ್ರಕಟಿಸಿದ್ದು, 37 ಸದಸ್ಯರನ್ನು ಒಳಗೊಂಡಿರುವ ಈ ಪಟ್ಟಿಯಲ್ಲಿ ಸಮಿತ್ ದ್ರಾವಿಡ್ ಕೂಡ ಕಾಣಿಸಿಕೊಂಡಿರುವುದು ವಿಶೇಷ.

ಬಿಸಿಸಿಐ ವಯೋಮಿತಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಸಮಿತ್ ದ್ರಾವಿಡ್, ಸಮರ್ಥ್ ನಾಗರಾಜ್, ಸ್ಮರಣ್ ಆರ್, ಕೃತಿಕ್ ಕೃಷ್ಣ, ಜಾಸ್ಪರ್ ಇ.ಜೆ ಸೇರಿದಂತೆ ಹಲವು ಯುವ ಆಟಗಾರರಿಗೆ ಈ ಬಾರಿ ಮಣೆ ಹಾಕಲಾಗಿದೆ.

ಕಿರಿಯರ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ತೋರಿ, ಇತ್ತೀಚೆಗೆ ಮುಕ್ತಾಯಗೊಂಡ 3ನೇ ಆವೃತ್ತಿಯ ಮಹಾರಾಜ ಟ್ರೋಫಿಯಲ್ಲಿ ಆಡಿದ್ದ ಸಮಿತ್‌, ಇದೀಗ ರಾಜ್ಯ ಹಿರಿಯರ ತಂಡವನ್ನೂ ಪ್ರತಿನಿಧಿಸುವ ನಿರೀಕ್ಷೆಯಲ್ಲಿದ್ದಾರೆ.

Samit Dravid
''ಎಲ್ಲ ಮಸಾಲೆಗಳಿಗೂ ಫುಲ್ ಸ್ಟಾಪ್''; Virat Kohli-Gautam Gambhir ವಿಶೇಷ ಮಾತುಕತೆ!

ಉಳಿದಂತೆ ಕೃಷ್ಣಪ್ಪ ಗೌತಮ್, ರೋನಿತ್ ಮೋರೆ ಸೇರಿದಂತೆ ಕೆಲ ಅನುಭವಿ ಆಟಗಾರರು ರಣಜಿ ತಂಡದ ಸಂಭಾವ್ಯ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಹಾಗೆಯೇ ಈ ಪಟ್ಟಿಯಲ್ಲಿ ಮಯಾಂಕ್ ಅಗರ್ವಾಲ್, ಮನೀಶ್ ಪಾಂಡೆ, ಕೆಎಲ್ ರಾಹುಲ್, ಪ್ರಸಿದ್ಧ್ ಕೃಷ್ಣ, ವೈಶಾಖ್ ವಿಜಯಕುಮಾರ್, ಶ್ರೇಯಸ್ ಗೋಪಾಲ್ ಸೇರಿದಂತೆ ಹಲವು ಅನುಭವಿ ಆಟಗಾರರು ಕಾಣಿಸಿಕೊಂಡಿದ್ದಾರೆ.

ಸಂಭವನೀಯ ತಂಡದಲ್ಲಿ ವಿಕೆಟ್​ ಕೀಪರ್​ಗಳಾಗಿ ನಾಲ್ವರು ಕಾಣಿಸಿಕೊಂಡಿದ್ದಾರೆ. ಅವರೆಂದರೆ ಲವ್​ನೀತ್ ಸಿಸೋಡಿಯಾ, ಶ್ರೀಜಿತ್ ಕೆಎಲ್, ಸುಜಯ್ ಎಸ್ ಹಾಗೂ ಕೃತಿಕ್ ಕೃಷ್ಣ. ಈ ನಾಲ್ವರಲ್ಲಿ ಇಬ್ಬರಿಗೆ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಬಹುದು.

ಸಂಭವನೀಯ ಆಟಗಾರರ ಪಟ್ಟಿ:

ಮಯಾಂಕ್‌ ಅಗರ್‌ವಾಲ್‌, ಕೆ.ಎಲ್‌.ರಾಹುಲ್‌, ಮನೀಶ್‌ ಪಾಂಡೆ, ದೇವದತ್‌ ಪಡಿಕ್ಕಲ್‌, ಪ್ರಸಿದ್ಧ್‌ ಕೃಷ್ಣ, ವಿದ್ವತ್‌ ಕಾವೇರಪ್ಪ, ವೈಶಾಖ್‌ ವಿಜಯ್‌ಕುಮಾರ್‌, ನಿಕಿನ್‌ ಜೋಸ್‌, ಸ್ಮರಣ್‌ ಆರ್‌, ಕಿಶನ್‌ ಬೆಡಾರೆ, ಅನೀಶ್‌ ಕೆ.ವಿ., ಶರತ್‌ ಶ್ರೀನಿವಾಸ್‌, ಸುಜಯ್‌ ಸತೇರಿ, ಕೃತಿಕ್‌ ಕೃಷ್ಣ, ವಾಸುಕಿ ಕೌಶಿಕ್‌, ಅಭಿಲಾಷ್‌ ಶೆಟ್ಟಿ, ವೆಂಕಟೇಶ್‌ ಎಂ., ಶ್ರೇಯಸ್‌ ಗೋಪಾಲ್‌, ಹಾರ್ದಿಕ್‌ ರಾಜ್‌, ಶುಭಾಂಗ್‌ ಹೆಗಡೆ, ರೋಹಿತ್‌ ಕುಮಾರ್‌, ಧೀರಜ್‌ ಗೌಡ, ಮೊಹ್ಸಿನ್‌ ಖಾನ್‌, ಶಶಿಕುಮಾರ್‌ ಕೆ., ಅಧೋಕ್ಷ್‌, ಶಿಖರ್‌ ಶೆಟ್ಟಿ, ಯಶೋವರ್ಧನ್‌, ವಿಶಾಲ್‌ ಓನತ್‌, ಜ್ಯಾಸ್ಪರ್‌ ಇ.ಜೆ., ಸಮಿತ್‌ ದ್ರಾವಿಡ್‌, ಕಾರ್ತಿಕೇಯ ಕೆ.ಪಿ., ಸಮರ್ಥ್‌ ನಾಗರಾಜ್‌, ಲುವ್ನಿತ್‌ ಸಿಸೋಡಿಯಾ, ಚೇತನ್‌ ಎಲ್‌.ಆರ್‌., ಅಭಿನವ್‌ ಮನೋಹರ್‌.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com