ನವದೆಹಲಿ: 2025ರ ಐಪಿಎಲ್ ಕ್ರಿಕೆಟ್ ಟೂರ್ನಿಯ ಸಿದ್ಧತೆಗಳು ಆರಂಭಗೊಂಡಿದ್ದು, ಚೆನ್ನೈ ಮತ್ತು ಕೋಲ್ಕತಾ ತಂಡಗಳಲ್ಲಿ ಮಹತ್ತರ ಬದಲಾವಣೆಗಳು ಆರಂಭವಾಗಿವೆ.
ಹೌದು.. ಇಷ್ಟು ದಿನ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ವೆಸ್ಟ್ ಇಂಡೀಸ್ ತಂಡದ ಮಾಜಿ ವೇಗಿ ಡ್ವೇಯ್ನ್ ಬ್ರಾವೋ ಇದೀಗ ಚೆನ್ನೈ ತಂಡ ತೊರೆದಿದ್ದು, ಕೋಲ್ಕತಾ ನೈಟ್ ರೈಡರ್ಸ್ ತಂಡ ಸೇರಿಕೊಂಡಿದ್ದಾರೆ.
ಕೋಲ್ಕತಾ ತಂಡದಲ್ಲಿ ಮೆಂಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಗೌತಮ್ ಗಂಭೀರ್ ಇದೀಗ ಟೀಂ ಇಂಡಿಯಾದ ಪ್ರಧಾನ ಕೋಚ್ ಆಗಿ ಆಯ್ಕೆಯಾಗಿದ್ದು, ಅವರ ಮೆಂಟರ್ ಸ್ಥಾನಕ್ಕೆ ಬ್ರಾವೋ ಆಯ್ಕೆಯಾಗಿದ್ದಾರೆ.
ಕೋಲ್ಕತಾ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ಅವರ ಸ್ಥಾನಕ್ಕೆ ಅನುಭವಿ ಕ್ರಿಕೆಟಿಗ ಡ್ವೇನ್ ಬ್ರಾವೋ ಅವರನ್ನು ನೇಮಕ ಮಾಡಲಾಗಿದೆ ಎಂದು ಕೆಕೆಆರ್ ಫ್ರಾಂಚೈಸಿ ತಿಳಿಸಿದೆ.
ಇತ್ತೀಚೆಗಷ್ಟೇ ಎಲ್ಲಾ ರೀತಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ಡ್ವೇನ್ ಬ್ರಾವೋ ಇದೀಗ ಐಪಿಎಲ್‌ನಲ್ಲಿ ಹೊಸ ತಂಡದೊಂದಿಗೆ ಕಾಣಿಸಿಕೊಳ್ಳಲಿದ್ದಾರೆ.
ಪ್ರಸ್ತುತ ವೆಸ್ಟ್ ಇಂಡೀಸ್ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಆಡುತ್ತಿದ್ದ ಬ್ರಾವೋ, ಗಾಯದ ಕಾರಣದಿಂದಾಗಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಈ ಮೂಲಕ ಬಹಳ ವರ್ಷಗಳಿಂದ ಸಿಎಸ್ಕೆ ತಂಡದೊಂದಿಗಿನ ಬಂಧವನ್ನು ಬ್ರಾವೋ ಮುರಿದುಕೊಂಡಿದ್ದಾರೆ.
ಕಳೆದ ಆವೃತ್ತಿಯವರೆಗೂ ಸಿಎಸ್ಕೆ ತಂಡದ ಬೌಲಿಂಗ್ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದ ಬ್ರಾವೋ, ಇದೀಗ ಕೆಕೆಆರ್ ತಂಡದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆ.
Advertisement