ಸಂಜು ಸ್ಯಾಮ್ಸನ್
ಸಂಜು ಸ್ಯಾಮ್ಸನ್

IPL 2025: NCA ಗ್ರೀನ್ ಸಿಗ್ನಲ್; ಇನ್ಮುಂದೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂಜು ಸ್ಯಾಮ್ಸನ್ ನಾಯಕ!

ಬೆರಳಿನ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದ ಸ್ಯಾಮ್ಸನ್ ಮೊದಲ ಮೂರು ಪಂದ್ಯಗಳಲ್ಲಿ ಆಡಿದ್ದರೂ ನಾಯಕನ ಜವಾಬ್ದಾರಿಯನ್ನು ರಿಯಾನ್ ಪರಾಗ್ ಅವರಿಗೆ ನೀಡಲಾಗಿತ್ತು.
Published on

ಬೆಂಗಳೂರು: ವಿಶ್ವದ ಶ್ರೀಮಂತ ಲೀಗ್ ಎನಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ನೇ ಆವೃತ್ತಿಯ ಆರಂಭವಾಗಿದ್ದು, ಸಂಜು ಸ್ಯಾಮ್ಸನ್ ಇದೀಗ ಮುಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.

ಬೆರಳಿನ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದ ಸ್ಯಾಮ್ಸನ್ ಮೊದಲ ಮೂರು ಪಂದ್ಯಗಳಲ್ಲಿ ಆಡಿದ್ದರೂ ನಾಯಕನ ಜವಾಬ್ದಾರಿಯನ್ನು ರಿಯಾನ್ ಪರಾಗ್ ಅವರಿಗೆ ನೀಡಲಾಗಿತ್ತು. ಆರ್‌ಆರ್ ಸದ್ಯ ಮೂರು ಪಂದ್ಯಗಳನ್ನು ಆಡಿದ್ದು, ಒಂದರಲ್ಲಿ ಮಾತ್ರ ಗೆಲುವು ಕಂಡಿದೆ. ಎಸ್‌ಆರ್‌ಎಚ್ ಮತ್ತು ಕೆಕೆಆರ್ ವಿರುದ್ಧ ಸೋಲು ಕಂಡಿದ್ದು, ಸಿಎಸ್‌ಕೆ ವಿರುದ್ಧ ಗೆಲುವು ಸಾಧಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ವಿಕೆಟ್ ಕೀಪಿಂಗ್ ಮಾಡಲು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಿಂದ (NCA) ಅನುಮತಿ ಪಡೆದ ನಂತರ ಸಂಜು ಸ್ಯಾಮ್ಸನ್ ರಾಜಸ್ಥಾನ ರಾಯಲ್ಸ್ ನಾಯಕನಾಗಿ ಮರಳಲಿದ್ದಾರೆ.

ಫೆಬ್ರುವರಿಯಲ್ಲಿ ಇಂಗ್ಲೆಂಡ್ ವಿರುದ್ಧದ ಭಾರತದ ಟಿ20ಐ ಸರಣಿಯ ಸಮಯದಲ್ಲಿ ಆರ್‌ಆರ್ ತಂಡದ ಮಾಜಿ ಸಹ ಆಟಗಾರ ಮತ್ತು ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಹೊಡೆತದ ನಂತರ ಸ್ಯಾಮ್ಸನ್ ಅವರ ಬಲಗೈ ತೋರುಬೆರಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

ಕೇವಲ ಬ್ಯಾಟರ್ ಆಗಿ ತಂಡದಲ್ಲಿ ಆಡಿದ್ದ ಸಂಜು ಸ್ಯಾಮ್ಸನ್ ತಾವು ಆಡಿರುವ ಮೂರು ಪಂದ್ಯಗಳಲ್ಲಿ ಕ್ರಮವಾಗಿ 66, 13 ಮತ್ತು 20 ರನ್‌ಗಳನ್ನು ಗಳಿಸಿದ್ದಾರೆ.

ಸಂಜು ಸ್ಯಾಮ್ಸನ್
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹೊಸ ನಾಯಕನ ಘೋಷಿಸಿದ ರಾಜಸ್ಥಾನ ರಾಯಲ್ಸ್; ಸಂಜು ಸ್ಯಾಮ್ಸನ್ ಬ್ಯಾಟರ್ ಮಾತ್ರ!

'ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಚೇತರಿಸಿಕೊಂಡ ನಂತರ ವಿಕೆಟ್ ಕೀಪಿಂಗ್ ಕರ್ತವ್ಯಗಳನ್ನು ಪುನರಾರಂಭಿಸಲು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಿಂದ (NCA) ಅನುಮತಿ ಪಡೆದಿದ್ದಾರೆ' ಎಂದು ರಾಜಸ್ಥಾನ್ ರಾಯಲ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

NCA ವೈದ್ಯಕೀಯ ತಂಡವು ಅವರ ಫಿಟ್ನೆಸ್ ಅನ್ನು ಸಂಪೂರ್ಣವಾಗಿ ಮೌಲ್ಯಮಾಪನ ಮಾಡಿದ ನಂತರ ಈ ಅನುಮತಿ ನೀಡಿದೆ. ಈ ಸಕಾರಾತ್ಮಕ ಬೆಳವಣಿಗೆಯೊಂದಿಗೆ, ಸ್ಯಾಮ್ಸನ್ ಪಂಜಾಬ್ ಕಿಂಗ್ಸ್ ವಿರುದ್ಧದ ಮುಂದಿನ ಪಂದ್ಯದಿಂದ ನಾಯಕತ್ವವನ್ನು ಪುನರಾರಂಭಿಸಲಿದ್ದಾರೆ.

ರಾಜಸ್ಥಾನ ರಾಯಲ್ಸ್ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಎರಡು ಸೋಲುಗಳೊಂದಿಗೆ ಪಾಯಿಂಟ್ ಟೇಬಲ್‌ನಲ್ಲಿ ಸದ್ಯ ಎರಡನೇ ಸ್ಥಾನದಲ್ಲಿದೆ. ರಾಜಸ್ಥಾನ ರಾಯಲ್ಸ್ ತಂಡವು ಏಪ್ರಿಲ್ 5 ರಂದು ಮುಲ್ಲನ್‌ಪುರದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com