
ಬೆಂಗಳೂರು: ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ (GT) ನಡುವೆ IPL ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ 8 ವಿಕೆಟ್ ಗಳಿಂದ ಗೆಲುವಿನ ನಗೆ ಬೀರಿತು.
ಈ ವೇಳೆ ಕ್ರೀಡಾಂಗಣದಿಂದ ಅಭಿಮಾನಿಯೊಬ್ಬನನ್ನು ಹೊರದಬ್ಬಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತಮ್ಮ ನೆಟ್ಟಿನ ತಂಡದ ಬಾವುಟಗಳನ್ನು ಕ್ರೀಡಾಂಗಣಕ್ಕೆ ತೆಗೆದುಕೊಂಡು ಹೋಗಲು ಅವಕಾಶವಿದೆ. ಆದರೆ ಇಲ್ಲಿ ಅಭಿಮಾನಿಯೊಬ್ಬ ದರ್ಶನ್ ಪೋಟೋವನ್ನು ತೆಗೆದುಕೊಂಡು ಕ್ರೀಡಾಂಗಣದ ಒಳಗೆ ಹೋಗಿದ್ದನು. ಇದನ್ನು ಗಮನಿಸಿದ ಸಿಬ್ಬಂದಿ ಆತನನ್ನು ಕ್ರೀಡಾಂಗಣದಿಂದ ಹೊರಕಳುಹಿಸಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಭೀಕರ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಸೆರೆ ಮನೆವಾಸ ಅನುಭವಿಸಿದ್ದು ನಂತರ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಸದ್ಯ ಡೇವಿಲ್ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
Advertisement