
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ನಿನ್ನೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ತವರಿನ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗುಜರಾತ್ ಟೈಟನ್ಸ್ ಎದುರು 8 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.
ಬೆಂಗಳೂರು ತಂಡ ನೀಡಿದ್ದ 170 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಗುಜರಾತ್ ಟೈಟನ್ಸ್ ತಂಡ 17.5 ಓವರ್ ನಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಈ ಪಂದ್ಯದಲ್ಲಿ ಬೆಂಗಳೂರು ತಂಡದ ವಿರುದ್ಧ ಪ್ರಭಾವಿ ಬೌಲಿಂಗ್ ಮಾಡಿದ ಮಹಮದ್ ಸಿರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಗುಜರಾತ್ ಟೈಟನ್ಸ್ ಪರ ಸಾಯಿ ಸುದರ್ಶನ್ 49 ರನ್ ಗೆ ಔಟಾಗಿ ಅರ್ಧಶತಕ ವಂಚಿತರಾದರು. ಶುಭ್ಮನ್ ಗಿಲ್ 14 ರನ್ ಗಳಿಸಿ ಔಟಾದರು. ನಂತರ ಜೋಸ್ ಬಟ್ಲರ್ ಅಜೇಯ 73 ಮತ್ತು ಶೆರ್ಫೇನ್ ರುದರ್ಫೋರ್ಡ್ ಅಜೇಯ 30 ರನ್ ಬಾರಿಸಿ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಸಿರಾಜ್ ಅದ್ಧುತ ಬೌಲಿಂಗ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಮೊದಲ ಪಂದ್ಯದಲ್ಲೇ ಮೊಹಮ್ಮದ್ ಸಿರಾಜ್ ಭರ್ಜರಿ ಬೌಲಿಂದ್ ಮಾಡಿದರು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದ ಆರ್ಸಿಬಿ ತಂಡದ ಮಾಜಿ ವೇಗಿ ಮೊಹಮ್ಮದ್ ಸಿರಾಜ್ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದರು. ಪವರ್ಪ್ಲೇನಲ್ಲೇ ದೇವದತ್ ಪಡಿಕ್ಕಲ್ ಹಾಗೂ ಫಿಲ್ ಸಾಲ್ಟ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದ ಸಿರಾಜ್, ಆರ್ಸಿಬಿ ತಂಡಕ್ಕೆ ಆರಂಭಿಕ ಆಘಾತ ನೀಡಿದ್ದರು. ಆ ಬಳಿಕ ಲಿಯಾಮ್ ಲಿವಿಂಗ್ಸ್ಟೋನ್ ವಿಕೆಟ್ ಕಬಳಿಸಿದರು. 4 ಓವರ್ಗಳಲ್ಲಿ ಮೊಹಮ್ಮದ್ ಸಿರಾಜ್ ಕೇವಲ 19 ರನ್ ನೀಡಿ 3 ವಿಕೆಟ್ ಕಬಳಿಸಿದರು.
ಚಿನ್ನಸ್ವಾಮಿ ಮೈದಾನದಲ್ಲಿ ಸಿರಾಜ್ ಬೆಸ್ಟ್ ಬೌಲಿಂಗ್
ಅಂತೆಯೇ ನಿನ್ನೆ ಮಹಮದ್ ಸಿರಾಜ್ ಮಾಡಿದ ಅದ್ಭುತ ಬೌಲಿಂಗ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅವರ ಬೆಸ್ಟ್ ಬೌಲಿಂಗ್ ಪರ್ಫಾಮೆನ್ಸ್ ಆಗಿದೆ.
ಆರ್ ಸಿಬಿ ವಿರುದ್ಧ ಸೇಡು ತೀರಿಸಿಕೊಂಡ್ರಾ ಸಿರಾಜ್
ಇನ್ನು ಸಿರಾಜ್ ಕಳೆದ 7 ವರ್ಷಗಳ ಕಾಲ ಆರ್ಸಿಬಿ ಪರ ಆಡಿದ್ದರು. ಆದರೆ ಸಿರಾಜ್ ಬೆಂಗಳೂರಿನಲ್ಲಿ ಒಮ್ಮೆಯೂ ಇಂತಹದೊಂದು ಪ್ರದರ್ಶನ ನೀಡಿರಲಿಲ್ಲ. ಆದರೆ ಕಳೆದ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಆರ್ ಸಿಬಿ ಸಿರಾಜ್ ರನ್ನು ಕೈ ಬಿಟ್ಟಿತ್ತು. ಬಳಿಕ ಸಿರಾಜ್ ಗುಜರಾತ್ ಟೈಟನ್ಸ್ ಪಾಲಾಗಿದ್ದರು. ಇದೀಗ ಇದೇ ಮೊದಲ ಬಾರಿಗೆ ಮೊಹಮ್ಮದ್ ಸಿರಾಜ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 4 ಓವರ್ಗಳಲ್ಲಿ 20 ಕ್ಕಿಂತ ಕಡಿಮೆ ರನ್ ನೀಡಿದ್ದಾರೆ.
ಇದೇ ಮೊದಲ ಬಾರಿಗೆ ಮೊಹಮ್ಮದ್ ಸಿರಾಜ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 4 ಓವರ್ಗಳಲ್ಲಿ 20 ಕ್ಕಿಂತ ಕಡಿಮೆ ರನ್ ನೀಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 4 ಓವರ್ಗಳಲ್ಲಿ 20 ಕ್ಕಿಂತ ಕಡಿಮೆ ರನ್ ನೀಡಿ ಐಪಿಎಲ್ನ ಸಕ್ರಿಯ ಬೌಲರ್ ಎಂಬ ದಾಖಲೆಯನ್ನು ಸಹ ಸಿರಾಜ್ ತಮ್ಮದಾಗಿಸಿಕೊಂಡಿದ್ದಾರೆ. 7 ವರ್ಷಗಳಲ್ಲಿ ಆರ್ಸಿಬಿ ಪರ ಕಣಕ್ಕಿಳಿದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಾಧ್ಯವಾಗದ ಸಾಧನೆಯನ್ನು ಮೊಹಮ್ಮದ್ ಸಿರಾಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಮೊದಲ ಪಂದ್ಯದಲ್ಲೇ ಸಾಧಿಸಿರುವುದೇ ವಿಶೇಷ.
ಗುಜರಾತ್ ಟೈಟನ್ಸ್ ವ್ಯಂಗ್ಯ!
ಇನ್ನು ಸಿರಾಜ್ ಅದ್ಭುತ ಬೌಲಿಂಗ್ ಕುರಿತು ಮತ್ತು ಆರ್ ಸಿಬಿ ಕುರಿತು ವ್ಯಂಗ್ಯಾತ್ಮಕ ಟ್ವೀಟ್ ಮಾಡಿರುವ ಗುಜರಾತ್ ಟೈಟನ್ಸ್, 'ಮುಜೆ ಕ್ಯೂ ತೋಡಾ?' 'ನನ್ನನ್ನು ಯಾಕೆ ಮುರಿದು ಹಾಕಿದೆ?'s ಎಂದು ವಿಕೆಟ್ ಗಳು ಸಿರಾಜ್ ರನ್ನು ಪ್ರಶ್ನಿಸುವಂತೆ ಟ್ವೀಟ್ ಮಾಡಿದೆ.
Advertisement