
ಮುಂಬೈ: ಬೆನ್ನುನೋವಿನಿಂದ ಚೇತರಿಸಿಕೊಂಡಿರುವ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಿದ್ದಾರೆ. ಮುಂಬರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧದ ಪಂದ್ಯದಲ್ಲಿ ಅವರು ಆಡುವುದನ್ನು ತಂಡದ ಕೋಚ್ ಮಹೇಲಾ ಜಯವರ್ಧನೆ ಖಚಿತಪಡಿಸಿದ್ದಾರೆ.
ಬುಮ್ರಾ ಅವರ ಪುನರಾಗಮನ ಗೆಲುವಿನ ಹಳಿಗೆ ಮರಳುವ ತವಕದಲ್ಲಿರುವ ಮುಂಬೈ ಇಂಡಿಯನ್ಸ್ ಗೆ ಬಲ ತುಂಬಿದಂತಾಗಿದೆ ಎಂದು ಪರಿಗಣಿಸಲಾಗಿದೆ. ಆದರೂ ಅವರ ಸ್ಪರ್ಧಾತ್ಮಕ ಆಟ ಮತ್ತು ಮತ್ತೆ ಗಾಯದ ಅಪಾಯದ ನಡುವಿನ ಸಮತೋಲನದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಜಸ್ಪ್ರೀತ್ ಬೂಮ್ರಾ ಕಂಬ್ಯಾಕ್ ಬಗ್ಗೆ ಅಭಿಮಾನಿಗಳು ಮತ್ತು ವಿಶ್ಲೇಷಕರು ತೀವ್ರ ಉತ್ಸುಕರಾಗಿದ್ದಾರೆ. ಅನೇಕರು ತಮ್ಮ ಸಂತೋಷ ಮತ್ತು ನಿರೀಕ್ಷೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದಾಗ್ಯೂ, ಅವರಿಗೆ ಗಾಯ ಆಗಿದ್ದನ್ನು ಗಮನದಲ್ಲಿಟ್ಟುಕೊಂಡು ಅವರ ಫಿಟ್‌ನೆಸ್ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ.
ಸೋಮವಾರ ವಾಂಖೆಡೆ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್ ಸೆಣಸಾಟ ನಡೆಸಲಿದೆ. ಇದರಲ್ಲಿ ಬುಮ್ರಾ ಆಡುವುದು ಬಹುತೇಕ ಖಚಿತವಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹೇಲಾ ಜಯವರ್ಧನೆ, ಬುಮ್ರಾ ಲಭ್ಯವಿದ್ದಾರೆ. ಅವರು ಫಿಟ್ ಆಗಿದ್ದು , ತಂಡದ ಜೊತೆಗೆ ತರಬೇತಿ ಪಡೆಯುತ್ತಿದ್ದಾರೆ. ನಿನ್ನೆ ರಾತ್ರಿ ತಂಡದೊಂದಿಗೆ ಸೇರಿಕೊಂಡಿದ್ದಾರೆ ಎಂದು ತಿಳಿಸಿದರು.
Advertisement