
ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ನಡುವೆ ಪಂದ್ಯ ನಡೆದಿದೆ. ಟಾಸ್ ಸೋಲು ಆರ್ ಸಿಬಿ ಮೊದಲು ಬ್ಯಾಟಿಂಗ್ ಮಾಡಿದ್ದು ತಂಡದ ಪರ ಬ್ಯಾಟರ್ ಗಳು ಸ್ಫೋಟಕ ಬ್ಯಾಟಿಂಗ್ ಮಾಡಿದರು.
ಆರ್ ಸಿಬಿ ನಾಯಕ ರಜತ್ ಪಾಟಿದಾರ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 32 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಮತ್ತು ಐದು ಬೌಂಡರಿ ಸೇರಿದಂತೆ 64 ರನ್ ಪೇರಿಸಿದರು. ಇನ್ನು ವಿರಾಟ್ ಕೊಹ್ಲಿ ಸಹ ಈ ಪಂದ್ಯದಲ್ಲಿ ಆರ್ಭಟಿಸಿದ್ದು 42 ಎಸೆತಗಳಲ್ಲಿ ಎರಡು ಸಿಕ್ಸರ್ ಮತ್ತು ಎಂಟು ಬೌಂಡರಿ ಸೇರಿದಂತೆ 67 ರನ್ ಬಾರಿಸಿದರು. ಇನ್ನು ದೇವದತ್ ಪಡಿಕ್ಕಲ್ ಸಹ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 22 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 2 ಬೌಂಡರಿ ಸೇರಿದಂತೆ 37 ರನ್ ಬಾರಿಸಿ ಔಟಾದರು.
ಜಿತೇಶ್ ಶರ್ಮಾ ಸಹ ಇಂದು ಮುಂಬೈ ಬೌಲರ್ ಗಳನ್ನು ದಂಡಿಸಿದರು. 19 ಎಸೆತಗಳಲ್ಲಿ 4 ಸಿಕ್ಸರ್ ಮತ್ತು ಎರಡು ಬೌಂಡರಿ ಸೇರಿದಂತೆ ಅಜೇಯ 40 ರನ್ ಬಾರಿಸಿದರು. ಮುಂಬೈ ಪರ ಹಾರ್ದಿಕ್ ಪಾಂಡ್ಯ ಮತ್ತು ಟ್ರೆಂಟ್ ಬೌಲ್ಟ್ ತಲಾ 2 ವಿಕೆಟ್ ಪಡೆದರೆ ವಿಘ್ನೇಶ್ ಪುತುರ್ 1 ವಿಕೆಟ್ ಪಡೆದಿದ್ದಾರೆ.
Advertisement