
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)ರ 24ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿಗೆ ಸ್ಫೋಟಕ ಆರಂಭ ಸಿಕ್ಕಿದೆ. ಫಿಲ್ ಸಾಲ್ಟ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ಆರ್ ಸಿಬಿ ತಂಡ 18 ಎಸೆತಗಳಲ್ಲಿ 53 ರನ್ ಪೂರೈಸಿದೆ. ಇದು ಈ ಋತುವಿನ ಸ್ಫೋಟಕ ಆರಂಭ ಇದಾಗಿದೆ. ಐಪಿಎಲ್ ಇತಿಹಾಸದಲ್ಲಿ ಅತಿ ವೇಗವಾಗಿ 50 ರನ್ ಗಳಿಸಿದ ತಂಡ ಎಂಬ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಂದಿತ್ತು. 2011ರಲ್ಲಿ ಕೊಚ್ಚಿ ಟಸ್ಕರ್ಸ್ ಕೇರಳ ವಿರುದ್ಧ ಕೇವಲ 2.3 ಓವರ್‌ಗಳಲ್ಲಿ ಈ ಸಾಧನೆ ಮಾಡಿತ್ತು. ಅಂದು ಕ್ರಿಸ್ ಗೇಲ್ ಆ ಪಂದ್ಯದಲ್ಲಿ ಒಂದು ಓವರ್‌ನಲ್ಲಿ 37 ರನ್ ಗಳಿಸಿದ್ದು ಹೀಗಾಗಿ ವೇಗದ ಅರ್ಧ ಶತಕ ಪೂರೈಸಲು ಸಾಧ್ಯವಾಗಿತ್ತು.
Advertisement