
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)ನ 24ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಪ್ರಕಾರ ರಾತ್ರಿ 7.30ಕ್ಕೆ ಪಂದ್ಯ ಶುರುವಾಗಲಿದೆ.
ನಾಲ್ಕು ಪಂದ್ಯಗಳನ್ನಾಡಿರುವ ಆರ್ ಸಿಬಿ ತಂಡ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ಮೂರಕ್ಕೆ ಮೂರು ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಹೆಚ್ಚಿನ ರನ್ ಅಂತರದಿಂದ ಗೆದ್ದರೆ ಎರಡನೇ ಸ್ಥಾನಕ್ಕೇರುತ್ತದೆ. ಇಲ್ಲದಿದ್ದರೆ ಮೂರನೇ ಸ್ಥಾನದಲ್ಲೇ ಮುಂದುವರೆಯುತ್ತದೆ.
ಆದರೆ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಆತಂಕ ಎದುರಾಗಿದೆ. ಇಂದಿನಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಏಳು ದಿನಗಳ ಕಾಲ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಮಳೆ ಬೀಳುವ ಸಾಧ್ಯತೆ ಹೆಚ್ಚಿದೆ.
Advertisement