
ಹೈದರಾಬಾದ್: ಹೈದರಾಬಾದಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2025ರ ಟೂರ್ನಿಯ 27ನೇ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರ ವೈಭವದ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ 8 ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 245 ರನ್ ಗಳಿಸಿತು. ಆರಂಭಿಕ ಆಟಗಾರ ಪ್ರಿಯಾಂಶ್ ಆರ್ಯ 36, ಪ್ರಭಾಸಿಮ್ರನ್ ಸಿಂಗ್ 42, ನಾಯಕ ಶ್ರೇಯಸ್ ಅಯ್ಯರ್ 82, ನೆಹಲ್ ವಾಧೇರಾ 27, ಗ್ಲೇನ್ ಮ್ಯಾಕ್ಸ್ ವೆಲ್ 34 ರನ್ ಗಳಿಸುವ ಮೂಲಕ ಸನ್ ರೈಸರ್ಸ್ ಗೆಲ್ಲಲು 246 ರನ್ ಗಳ ಸವಾಲಿನ ಗುರಿ ನೀಡಿತು.
ಹೈದರಾಬಾದ್ ಪರ ಹರ್ಷಲ್ ಪಟೇಲ್ 4 ವಿಕೆಟ್ ಪಡೆದರೆ, ಇಶಾನ್ ಮಲಿಂಗ 2 ವಿಕೆಟ್ ಗಳಿಸಿದರು.
ಈ ಗುರಿ ಬೆನ್ನಟ್ಟಿದ್ದ ಸನ್ ರೈಸರ್ಸ್ ಹೈದರಾಬಾದ್ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ 66, ಅಭಿಷೇಕ್ ಶರ್ಮಾ 141, ಹೆನ್ರಿಚ್ ಕ್ಲಾಸೆನ್ 21ರನ್ ಗಳಿಸುವುದರೊಂದಿಗೆ 18.3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 247 ರನ್ ಗಳಿಸುವುದರೊಂದಿಗೆ ಗೆಲುವಿನ ನಗೆ ಬೀರಿತು.
Advertisement