
ನವದೆಹಲಿ: ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮಹಿಳಾ ಆಲ್‌ರೌಂಡರ್ ಕಾಶ್ವೀ ಗೌತಮ್‌ಗೆ ಭಾನುವಾರ ವಿಶೇಷವಾದ ಉಡುಗೊರೆಯೊಂದನ್ನು ನೀಡಿದ್ದಾರೆ.
ಮುಂಬೈ ಇಂಡಿಯನ್ಸ್ ವಿರುದ್ಧದ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಪಂದ್ಯದ ವೇಳೆ ಕಾಶ್ವೀ ಅವರನ್ನು ಭೇಟಿಯಾಗಿದ್ದ ಹಾರ್ದಿಕ್ ಪಾಂಡ್ಯ, ಆಕೆಗೆ ಬ್ಯಾಟ್ ಕಳುಹಿಸುವುದಾಗಿ ಭರವಸೆ ನೀಡಿದ್ದರು. ಆದರಂತೆ ಇಂದು ತಮ್ಮನ್ನು ಭೇಟಿಯಾದ ಕಾಶ್ಮೀ ಅವರಿಗೆ ತನ್ನ ಬ್ಯಾಟ್ ನ್ನು ಗಿಫ್ಟ್ ಆಗಿ ಪಾಂಡ್ಯ ನೀಡಿದ್ದಾರೆ.
ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಗುಜರಾತ್ ಟೈಟನ್ಸ್ ಪರ ಆಡಿದ್ದ ಕಾಶ್ಮೀ ಅವರಿಗೆ ಹಾರ್ದಿಕ್ ಪಾಂಡ್ಯ ನೆಚ್ಚಿನ ಆಟಗಾರರಾಗಿದ್ದಾರೆ.
2025ರ ಆವೃತ್ತಿಯಲ್ಲಿ ಇದೇ ಮೊದಲ ಬಾರಿಗೆ IPL ನಲ್ಲಿ ಗುಜರಾತ್ ಟೈಟನ್ಸ್ ಪರ ಆಡಿರುವ ಕಾಶ್ವೀ, 9 ಪಂದ್ಯಗಳಲ್ಲಿ 11 ವಿಕೆಟ್ ಪಡೆಯುವುದರೊಂದಿಗೆ 43 ರನ್ ಗಳಿಸಿದರು. 21 ವರ್ಷದ ಆಟಗಾರ್ತಿ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ಪರ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ್ತಿಯೂ ಆಗಿದ್ದಾರೆ. ಏಪ್ರಿಲ್ 27 ರಂದು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಪ್ರಾರಂಭವಾಗುವ ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಅಂತಾರಾಷ್ಟ್ರೀಯ (ODI)ಸರಣಿಗೆ ಆಕೆಯು ಭಾರತದಲ್ಲಿ ಸ್ಥಾನ ಪಡೆದಿದ್ದಾರೆ.
ಏಪ್ರಿಲ್ 27 ರಂದು ನಡೆಯಲಿರುವ ಆರಂಭಿಕ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಭಾರತ ಎದುರಿಸಲಿದೆ. ಭಾನುವಾರ ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯ ಆರಂಭಕ್ಕೂ ಮುನ್ನಾ ಕಾಶ್ವೀ ಅವರನ್ನು ಎರಡನೇ ಬಾರಿಗೆ ಹಾರ್ದಿಕ್ ಪಾಂಡ್ಯ ಭೇಟಿಯಾದರು. ಕಾಶ್ವೀಯ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದರು.
Advertisement