IPL 2025: ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲಲು 206 ರನ್ ಟಾರ್ಗೆಟ್ ನೀಡಿದ ಮುಂಬೈ ಇಂಡಿಯನ್ಸ್!
ನವದೆಹಲಿ: ರಾಷ್ಟ್ರ ರಾಜಧಾನಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2025 ರ 29 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲಲು 206 ರನ್ ಗಳ ಟಾರ್ಗೆಟ್ ನ್ನು ಮುಂಬೈ ಇಂಡಿಯನ್ಸ್ ನೀಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. ಮತ್ತೆ ವೈಫಲ್ಯಕ್ಕೊಳಗಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ 18 ರನ್ ಗಳಿಸಿದಾಗ ಎಲ್ ಬಿಡಬ್ಲ್ಯೂಗೆ ಬಲಿಯಾದರು.
ರಿಯಾನ್ ರಿಕಲ್ಟನ್ 41 ರನ್ ಗಳಿಸಿ ಕುಲದೀಪ್ ಯಾದವ್ ಬೌಲಿಂಗ್ ನಲ್ಲಿ ಬೌಲ್ಡ್ ಆದರು. ನಂತರ ಬಂದ ಸೂರ್ಯ ಕುಮಾರ್ ಯಾದರ್ 40, ತಿಲಕ್ ವರ್ಮಾ 59 ರನ್ ಗಳಿಸುವ ಮೂಲಕ ತಂಡದ ಮೊತ್ತವನ್ನು ಸ್ವಲ್ಪ ಹಿಗ್ಗಿಸಿದರು. ನಮನ್ ಧಿರ್ 38 ರನ್ ಗಳಿಸುವುದರೊಂದಿಗೆ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 205 ರನ್ ಕಲೆಹಾಕಿತು.
ಇನ್ನೂ ಡೆಲ್ಲಿ ಕ್ಯಾಪಿಟಲ್ಸ್ ಪರ ವಿಪ್ರಾಜ್ ನಿಗಮ್ ಹಾಗೂ ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದರೆ, ಮುಕೇಶ್ ಕುಮಾರ್ 1 ವಿಕೆಟ್ ಪಡೆದರು.
ಮುಂಬೈ ಇಂಡಿಯನ್ಸ್ ನೀಡಿದ 206 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಜೇಕ್ ಫ್ರೇಸರ್ ಎಂಸಿ ಗುರ್ಕ್, ಚಹಾರ್ ಬೌಲಿಂಗ್ ನಲ್ಲಿ ಕ್ಯಾಚ್ ನೀಡಿ, ಯಾವುದೇ ರನ್ ಗಳಿಸಿದೆ ಶೂನ್ಯಕ್ಕೆ ಔಟಾದರು.