
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಎಂಟು ವಿಕೆಟ್‌ಗಳ ಜಯ ಸಾಧಿಸಿದ ನಂತರ ಸನ್‌ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ 2025ರ ಪಾಯಿಂಟ್ಸ್ ಟೇಬಲ್‌ನಲ್ಲಿ ಕೊನೆಯ ಸ್ಥಾನದಿಂದ 8ನೇ ಸ್ಥಾನಕ್ಕೆ ಜಿಗಿದಿದೆ. ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಈಗ ಅಂಕಪಟ್ಟಿಯಲ್ಲಿ ಕೊನೆಯ ಎರಡು ಸ್ಥಾನಗಳನ್ನು ಪಡೆದಿವೆ.
ಶನಿವಾರ ಏಕಾನಾ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಐಡೆನ್ ಮಾರ್ಕ್ರಾಮ್ ಮತ್ತು ನಿಕೋಲಸ್ ಪೂರನ್ ಅವರ ಆಕರ್ಷಕ ಅರ್ಧಶತಕಗಳ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆಲುವು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿತು.
ಸದ್ಯ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿರುವ 4 ಪಂದ್ಯಗಳಲ್ಲಿ ನಾಲ್ಕರಲ್ಲೂ ಗೆಲುವು ಸಾಧಿಸುವುದರೊಂದಿಗೆ ಉತ್ತಮ ನೆಟ್ ರನ್ ರೇಟ್ ಹೊಂದಿದ್ದು, ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದೆ. ಇತ್ತ ಆಡಿರುವ ಆರು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಸಾಧಿಸಿರುವ ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಎರಡನೇ ಸ್ಥಾನದಲ್ಲಿದೆ.
ಲಕ್ನೋ ಸೂಪರ್ ಜೈಂಟ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನದಲ್ಲಿದ್ದು, ಆಡಿರುವ 5 ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್, ಸನ್‌ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕ್ರಮವಾಗಿ 6, 7, 8, 9, 10ನೇ ಸ್ಥಾನಗಳಲ್ಲಿವೆ.
ಆರೆಂಜ್ ಕ್ಯಾಪ್ ಯಾರಿಗೆ?
ಲಕ್ನೋ ಸೂಪರ್ ಜೈಂಟ್ಸ್ ತಂಡದ ನಿಕೋಲಸ್ ಪೂರನ್ 349 ರನ್‌ಗಳೊಂದಿಗೆ ಆರೆಂಜ್ ಕ್ಯಾಪ್ ಮಾಲೀಕರಾಗಿದ್ದಾರೆ. ಎರಡನೇ ಸ್ಥಾನದಲ್ಲಿ 329 ರನ್ ಗಳಿಸುವ ಮೂಲಕ ಗುಜರಾತ್ ಟೈಟಾನ್ಸ್ ತಂಡದ ಸಾಯಿ ಸುದರ್ಶನ್ ಇದ್ದಾರೆ. ಮಿಚೆಲ್ ಮಾರ್ಷ್, ಶ್ರೇಯಸ್ ಅಯ್ಯರ್ ಮತ್ತು ಜೋಸ್ ಬಟ್ಲರ್ ಕ್ರಮವಾಗಿ ಮೂರು, ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.
ಪರ್ಪಲ್ ಕ್ಯಾಪ್ ಮಾಲೀಕ
ಈ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹೀನಾಯ ಪ್ರದರ್ಶನ ನೀಡುತ್ತಿದ್ದರೂ ತಂಡದ ನೂರ್ ಅಹ್ಮದ್ 6 ಪಂದ್ಯಗಳಲ್ಲಿ 12 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಪರ್ಪಲ್ ಕ್ಯಾಪ್ ಮಾಲೀಕರಾಗಿದ್ದಾರೆ. ಎಲ್‌ಎಸ್‌ಜಿ ತಂಡದ ಶಾರ್ದೂಲ್ ಠಾಕೂರ್ 11 ವಿಕೆಟ್ ಮೂಲಕ ಎರಡನೇ ಸ್ಥಾನದಲ್ಲಿದ್ದರೆ, ಗುಜರಾತ್ ಟೈಟಾನ್ಸ್ ತಂಡದ ಪ್ರಸಿದ್ಧ್ ಕೃಷ್ಣ, ಸಾಯಿ ಕಿಶೋರ್ ಮತ್ತು ಮೊಹಮ್ಮದ್ ಸಿರಾಜ್ 10 ವಿಕೆಟ್‌ಗಳನ್ನು ಪಡೆಯುವ ಮೂಲಕ ನಂತರದ ಸ್ಥಾನಗಳಲ್ಲಿದ್ದಾರೆ.
Advertisement