
ನವದೆಹಲಿ: ರಾಷ್ಟ್ರ ರಾಜಧಾನಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಗೆ ರೂ. 12 ಲಕ್ಷ ದಂಡ ವಿಧಿಸಲಾಗಿದೆ.
ಈ ಬಾರಿಯ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಡೆಲ್ಲಿ ಕ್ಯಾಪಿಟಲ್ಸ್ ನಿಧಾನಗತಿಯ ಬೌಲಿಂಗ್ ಮಾಡಿದೆ. ಐಪಿಎಲ್ ನೀತಿ ಸಂಹಿತೆಯ ನಿಯಮ 2.22 ಅನ್ನು ಉಲ್ಲಂಘಿಸಿದ್ದಕ್ಕಾಗಿ ನಾಯಕ ಅಕ್ಷರ್ ಪಟೇಲ್ ಗೆ ರೂ.12 ಲಕ್ಷ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.
ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 12 ರನ್ ಗಳಿಂದ ಮುಂಬೈ ಇಂಡಿಯನ್ಸ್ ಮಣಿಸಿತು. ಇದರಿಂದಾಗಿ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಾರುವಂತಾಗಿದೆ.
Advertisement