
ಚಾಂಪಿಯನ್ಸ್ ಟ್ರೋಫಿ ಟೂರ್ನಿ ವೇಳೆ ರೋಹಿತ್ ಶರ್ಮಾ ಅವರ ದೇಹ ತೂಕದ ಕುರಿತು ಕಾಂಗ್ರೆಸ್ ವಕ್ತಾರೆ ಡಾ. ಶಮಾ ಮೊಹಮ್ಮದ್ ಟೀಕೆ ಮಾಡಿದ್ದರು. ನಂತರ ಅದಕ್ಕಾಗಿ ಶಮಾ ಕ್ಷಮೆಯಾಚಿಸಿದ್ದರು. ಆಟಗಾರರಿಗೆ ಫಿಟ್ನೆಸ್ ಅನ್ನುವುದು ತುಂಬಾ ಮುಖ್ಯವಾಗುತ್ತದೆ.
ಇಲ್ಲದಿದ್ದರೆ ಅದು ಅವರ ಪ್ರದರ್ಶನದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಸದ್ಯದ ಮಟ್ಟಿಗೆ ಪಾಕಿಸ್ತಾನದ ಕ್ರಿಕೆಟ್ ನಲ್ಲಿ ಪ್ರಸ್ತುತ ಹೆಚ್ಚು ಪ್ರಸಿದ್ಧಿ ಪಡೆದಿರುವುದು ಮಾಜಿ ನಾಯಕ ಬಾಬರ್ ಅಜಂ. ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಅಭಿಮಾನಿಗಳ ಅಭಿಮಾನಕ್ಕೆ ಪಾತ್ರರಾಗಿದ್ದಾರೆ. ಆದರೆ ಬರಬರುತ್ತಾ ಅಜಂ ದೇಹದ ತೂಕ ಹೆಚ್ಚಾಗುತ್ತಿದೆ. ಇದರಿಂದಾಗಿ ಹೆಚ್ಚು ಪರಿಣಾಮಕಾರಿ ಬ್ಯಾಟಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ.
ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ ಪೇಶಾವರ್ ಝಲ್ಮಿ ತಂಡದ ನಾಯಕ ಬಾಬರ್ ಆಝಂ ಮೊದಲ ಪಂದ್ಯದಲ್ಲೇ ಶೂನ್ಯಕ್ಕೆ ಔಟಾಗಿದ್ದರು. ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡ ನೀಡಿದ 217 ರನ್ ಗಳ ಗುರಿ ಬೆನ್ನಟ್ಟಿದ ಪೇಶಾವರ್ ತಂಡದ ಪರವಾಗಿ ಆರಂಭಿಕರಾಗಿ ಕಣಕ್ಕಿಳಿದ ಅಜಂ ಕೇವಲ 2 ಎಸೆತಗಳಲ್ಲಿ ಶೂನ್ಯಕ್ಕೆ ಔಟಾದರು. ಡಕ್ ಔಟ್ ಆಗಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದ ಬಾಬರ್ ಅಜಂನನ್ನು ಅಭಿಮಾನಿಗಳು ಝಿಂಬಾಬರ್ ಘೋಷಣೆಯೊಂದಿಗೆ ಗೇಲಿ ಮಾಡಿದರು. ಈ ವಿಡಿಯೋ ಇದೀಗ ವೈರಲ್ ಆಗಿದೆ.
Advertisement