
ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಐಪಿಎಲ್ 2025 ಟೂರ್ನಿಯ 33ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 4 ವಿಕೆಟ್ ಗಳ ಅಂತರದಿಂದ ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು. ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ 40 ರನ್ ಗಳಿಸಿದಾಗ ಪಾಂಡ್ಯ ಬೌಲಿಂಗ್ ನಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಟ್ರಾವಿಸ್ ಹೆಡ್ ಕೂಡಾ 28 ರನ್ ಗಳಿಸಿ ಕ್ಯಾಚ್ ನೀಡಿ ಫೆವಿಲಿಯನ್ ಗೆ ಹೆಜ್ಜೆ ಹಾಕಿದರು.
ಬಳಿಕ ಬಂದ ಇಶಾನ್ ಕಿಶಾನ್ ಕೇವಲ 2 ರನ್ ಗಳಿಗೆ ಔಟಾದರೆ, ನಿತೀಶ್ ಕುಮಾರ್ ರೆಡ್ಡಿ 19, ಹೆನ್ರಿಕ್ ಕ್ಲಾಸೆನ್ 37, ಅನಿಕೇತ್ ವರ್ಮಾ 18, ನಾಯಕ ಪ್ಯಾಟ್ ಕಮ್ಮಿನ್ಸ್ ಕೇವಲ 8 ರನ್ ಗಳಿಸಲಷ್ಟೇ ಶಕ್ತರಾದರು. ಹೀಗಾಗಿ ನಿಗದಿತ ಓವರ್ ಗಳಲ್ಲಿ 162 ರನ್ ಗಳಿಸಿದ ಸನ್ ರೈಸರ್ಸ್ ಹೈದರಾಬಾದ್, ಮುಂಬೈ ಗೆಲ್ಲಲು 163 ರನ್ ಗಳ ಟಾರ್ಗೆಟ್ ನೀಡಿತು.
ಮುಂಬೈ ಇಂಡಿಯನ್ಸ್ ಪರ ವಿಲ್ ಜಾಕ್ಸ್ 2 ವಿಕೆಟ್ ಪಡೆದರೆ, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬೂಮ್ರಾ, ಹಾರ್ದಿಕ್ ಪಾಂಡ್ಯ ತಲಾ ಒಂದೊಂದು ವಿಕೆಟ್ ಪಡೆದರು.
ಸನ್ ರೈಸರ್ಸ್ ಹೈದರಾಬಾದ್ ನೀಡಿದ 163 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಮುಂಬೈ ಇಂಡಿಯನ್ ಪರ ರಿಯಾನ್ ರಿಕೆಲ್ಟನ್ 31, ರೋಹಿತ್ ಶರ್ಮಾ 26, ವಿಲ್ ಜಾಕ್ಸ್ 36 ರನ್ ಗಳಿಸಿದರು. ಸೂರ್ಯ ಕುಮಾರ್ ಯಾದವ್ 26, ತಿಲಕ್ ವರ್ಮಾ ಔಟಾಗದೇ 17, ನಾಯಕ ಹಾರ್ದಿಕ್ ಪಾಂಡ್ಯ 21 ರನ್ ಗಳಿಸುವುದರೊಂದಿಗೆ ಮುಂಬೈ ಇಂಡಿಯನ್ಸ್ 17.5 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 166 ರನ್ ಗಳಿಸುವುದರೊಂದಿಗೆ ಗೆಲುವಿನ ನಗೆ ಬೀರಿತು.
Advertisement