IPL 2025: CSK ಕ್ಯಾಂಪ್ ಸೇರಿದ Dewald Brevis; ಮುಂಬೈ ಆಟಗಾರನಿಗೆ ಚೆನ್ನೈ ಗಾಳ, ಗುರ್ಕಿರೀಟ್ ಸಿಂಗ್ ಗೆ ಗಾಯ

2025 ರ ಐಪಿಎಲ್‌ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸ್ಫೋಟಕ ಬ್ಯಾಟರ್​ನ ಅಗಮನವಾಗಿದೆ.
Chennai Super Kings Recruit Dewald Brevis
ಚೆನ್ನೈ ತಂಡ ಸೇರಿದ ಡೆವಾಲ್ಡ್ ಬ್ರೆವಿಸ್
Updated on

ಚೆನ್ನೈ: ಹಾಲಿ ಐಪಿಎಲ್ ಟೂರ್ನಿಯಲ್ಲಿ ಆಟಗಾರರ ಗಾಯದ ಸಮಸ್ಯೆಯಿಂದ ಗೊಂದಲಕ್ಕೀಡಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಬಹುದೊಡ್ಡ ರಿಲೀಫ್ ಸಿಕ್ಕಿದ್ದು, ಮತ್ತೋರ್ವ ಸ್ಟಾರ್ ಆಟಗಾರ CSK ಕ್ಯಾಂಪ್ ಸೇರಿದ್ದಾರೆ.

ಹೌದು.. 2025 ರ ಐಪಿಎಲ್‌ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸ್ಫೋಟಕ ಬ್ಯಾಟರ್​ನ ಅಗಮನವಾಗಿದ್ದು, ಏಪ್ರಿಲ್ 18 ರಂದು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿರುವ ಸಿಎಸ್​ಕೆ ಫ್ರಾಂಚೈಸಿ, ದಕ್ಷಿಣ ಆಫ್ರಿಕಾದ ಯುವ ಆಟಗಾರ ಡೆವಾಲ್ಡ್ ಬ್ರೆವಿಸ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿರುವುದಾಗಿ ತಿಳಿಸಿದೆ.

ಈ ಹಿಂದೆ ಸಿಎಸ್ ಕೆ ತಂಡದ ವೇಗಿ ಗುರ್ಜಪಾನಿ ಸಿಂಗ್ ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದರು. ಅವರ ಸ್ಥಾನಕ್ಕೆ ದಕ್ಷಿಣ ಆಫ್ರಿಕಾದ ಡೆವಾಲ್ಡ್ ಬ್ರೆವಿಸ್ ರನ್ನು ಸೇರಿಸಿಕೊಳ್ಳಲಾಗಿದೆ.

Chennai Super Kings Recruit Dewald Brevis
IPL 2025: ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ ಗೆಲುವು; DC ಬೌಲಿಂಗ್ ಕೋಚ್ ಮುನಾಫ್ ಪಟೇಲ್‌ಗೆ ದಂಡ!

ಬ್ಯಾಟಿಂಗ್ ಗೆ ಬಲ

ಇನ್ನು ಹಾಲಿ ಟೂರ್ನಿಯಲ್ಲಿ ಚೆನ್ನೈ ತಂಡದ ಬ್ಯಾಟಿಂಗ್‌ ವಿಭಾಗ ದುರ್ಬಲವಾಗಿದ್ದು, ಇದೇ ಕಾರಣಕ್ಕಾಗಿ ವೇಗದ ಬೌಲರ್ ಬದಲಿಗೆ ಬ್ಯಾಟ್ಸ್‌ಮನ್‌ನನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಟಿ20 ಸ್ವರೂಪದಲ್ಲಿ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿರುವ ಡೆವಾಲ್ಡ್ ಬ್ರೆವಿಸ್ ಅವರನ್ನು ಚೆನ್ನೈ ತಂಡ ಸೇರಿಸಿಕೊಂಡಿದೆ. ಅವರ ದಾಖಲೆಯೂ ಇದಕ್ಕೆ ಸಾಕ್ಷಿಯಾಗಿದ್ದು, ಈ ಬ್ಯಾಟ್ಸ್‌ಮನ್ ಕೇವಲ 81 ಟಿ20 ಪಂದ್ಯಗಳಲ್ಲಿ 123 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಅಂದಹಾಗೆ ಬ್ರೆವಿಸ್ ಪ್ರಸ್ತುತ ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಇತ್ತೀಚೆಗೆ ಅವರು ಕ್ರಿಕೆಟ್ ದಕ್ಷಿಣ ಆಫ್ರಿಕಾದ ಡಿವಿಷನ್-1 ಟಿ20 ಟೂರ್ನಮೆಂಟ್‌ನ ಕೊನೆಯ 6 ಇನ್ನಿಂಗ್ಸ್‌ಗಳಲ್ಲಿ ಒಂದು ಶತಕ ಮತ್ತು 3 ಅರ್ಧಶತಕಗಳನ್ನು ಬಾರಿಸಿದ್ದಾರೆ. ತಮ್ಮ ಟಿ20 ವೃತ್ತಿಜೀವನದಲ್ಲಿ, ಬ್ರೆವಿಸ್ 145 ರ ಸ್ಟ್ರೈಕ್ ರೇಟ್‌ನಲ್ಲಿ 1787 ರನ್ ಗಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com