IPL 2025: PBKS ವಿರುದ್ಧ RCBಗೆ ಭರ್ಜರಿ ಜಯ, ಸೇಡು ತೀರಿಸಿಕೊಂಡ Rajat Patidar ಪಡೆ

ಆರ್ ಸಿಬಿ ಪರ ದೇವದತ್ ಪಡಿಕ್ಕಲ್ ಮತ್ತು ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿ ಇಬರೂ ಅರ್ಧಶತಕ ಸಿಡಿಸಿದರು. ಜಿತೇಶ್ ಶರ್ಮಾ ಅಜೇಯ 11 ರನ್ ಗಳಿಸಿ ಗೆಲುವಿನ ಔಪಚಾರಿಕತೆ ಮುಗಿಸಿದರು.
Devdutt Padikkal-Virat Kohli
ದೇವದತ್ ಪಡಿಕ್ಕಲ್-ವಿರಾಟ್ ಕೊಹ್ಲಿ ಬ್ಯಾಟಿಂಗ್ ಅಬ್ಬರ
Updated on

ಚಂಡೀಗಢ: ಐಪಿಎಲ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 7 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿದೆ.

ಚಂಡೀಗಢದ ಮುಲ್ಲನ್ಪುರ್ ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನೀಡಿದ್ದ 158 ರನ್ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ತಂಡ 18.5 ಓವರ್ ನಲ್ಲೇ ಕೇವಲ 3 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿ ಜಯಭೇರಿ ಭಾರಿಸಿತು. ಆರ್ ಸಿಬಿ ಪರ ದೇವದತ್ ಪಡಿಕ್ಕಲ್ ಮತ್ತು ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದರು. ಇಬರೂ ಅರ್ಧಶತಕ ಸಿಡಿಸಿದರು.

ಕೇವಲ 1 ರನ್ ಗಳಿಸಿದ್ದ ಆರಂಭಿಕ ಆಟಗಾರ ಫಿಲಿಪ್ ಸಾಲ್ಟ್ ಅರ್ಶ್ ದೀಪ್ ಸಿಂಗ್ ಬೌಲಿಂಗ್ ನಲ್ಲಿ ಔಟಾಗಿ ಆರ್ ಸಿಬಿಗೆ ಆರಂಭಿಕ ಆಘಾತ ನೀಡಿದರು. ಆದರೂ ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ತಂಡವನ್ನು ಆರಂಭಿಕ ಆಘಾತದಿಂದ ಮೇಲೆತ್ತಿದರು.

Devdutt Padikkal-Virat Kohli
IPL 2025: RCB ವಿರುದ್ಧ PBKS ಪರದಾಟ, Rajat Patidar ಪಡೆಗೆ 158 ರನ್ ಗುರಿ

ವಿರಾಟ್ ಕೊಹ್ಲಿ 54 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ ಅಜೇಯ 73 ರನ್ ಗಳಿಸಿದರೆ, ಅವರಿಗೆ ಉತ್ತಮ ಸಾಥ್ ನೀಡಿದ ದೇವದತ್ ಪಡಿಕ್ಕಲ್ 35 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 5 ಬೌಂಡರಿಗಳ ನೆರವಿನಿಂದ 61 ರನ್ ಕಲೆಹಾಕಿ ಹರ್ಪೀತ್ ಬ್ರಾರ್ ಬೌಲಿಂಗ್ ನಲ್ಲಿ ಔಟಾದರು. ಬಳಿಕ ಕ್ರೀಸ್ ಗೆ ಬಂದ ನಾಯಕ ರಜತ್ ಪಟಿದಾರ್ 12 ರನ್ ಗಳಿಸಿದ್ದ ವೇಳೆ ಚಹಲ್ ಬೌಲಿಂಗ್ ನಲ್ಲಿ ದೊಡ್ಡ ಹೊಡೆತಕ್ಕೆ ಕೈಹಾಕಿ ವಿಕೆಟ್ ಕೈಚೆಲ್ಲಿದರು.

ಬಳಿಕ ಕ್ರೀಸ್ ಗೆ ಬಂದ ಜಿತೇಶ್ ಶರ್ಮಾ ವಿರಾಟ್ ಕೊಹ್ಲಿ ಜೊತೆಗೂಡಿ ಅಜೇಯ 11 ರನ್ ಗಳಿಸಿ ಗೆಲುವಿನ ಔಪಚಾರಿಕತೆ ಮುಗಿಸಿದರು.

ಪಂಜಾಬ್ ಪರ ಅರ್ಶ್ ದೀಪ್ ಸಿಂಗ್, ಹರ್ಪೀತ್ ಬ್ರಾರ್ ಮತ್ತು ಚಹಲ್ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com