IPL 2025, RCB vs RR: 'ಚಿನ್ನಸ್ವಾಮಿಯ ಕಿಂಗ್!' ತವರಿನಲ್ಲಿ ಮತ್ತೊಂದು ದಾಖಲೆ ಬರೆದ ವಿರಾಟ್ ಕೊಹ್ಲಿ!

ಐಪಿಎಲ್ 2025ರ ಈ ಆವೃತ್ತಿಯಲ್ಲಿ ತಮ್ಮ 5ನೇ ಅರ್ಧಶತಕ ಸಿಡಿಸುವ ಮೂಲಕ ಮತ್ತೊಂದು ದಾಖಲೆ ಬರೆದಿದ್ದಾರೆ. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದು ಅವರ 26ನೇ ಅರ್ಧಶತಕವಾಗಿತ್ತು.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Updated on

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ದಿನದಿಂದ ದಿನಕ್ಕೆ ಹೊಸ ದಾಖಲೆಗಳನ್ನು ಬರೆಯುತ್ತಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಆಡುವ ಪ್ರತಿಯೊಂದು ಪಂದ್ಯದಲ್ಲೂ ಕೊಹ್ಲಿ ದಾಖಲೆಗಳನ್ನು ಮುರಿಯುತ್ತಾ ಸಾಗಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ T20ಯಲ್ಲಿ 13000 ರನ್‌ಗಳ ಗಡಿಯನ್ನು ದಾಟಿದರು ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅತಿ ಹೆಚ್ಚು 50+ ರನ್‌ಗಳನ್ನು ಗಳಿಸಿದ ಬ್ಯಾಟ್ಸ್‌ಮನ್ ಆದರು.

ಇದೀಗ, ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟ್ ಇತಿಹಾಸದಲ್ಲಿ ಸ್ಥಳವೊಂದರಲ್ಲಿ 3500ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್ (ಭಾರತ) ಮತ್ತು ಫ್ರಾಂಚೈಸಿ ಕ್ರಿಕೆಟ್ (ಆರ್‌ಸಿಬಿ)ಗಳಲ್ಲಿ, ಕೊಹ್ಲಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಒಂದೇ ಸ್ಥಳದಲ್ಲಿ ಕೇವಲ ಆರು ಬ್ಯಾಟ್ಸ್‌ಮನ್‌ಗಳು ಮಾತ್ರ 3000ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ ಮತ್ತು 2000ಕ್ಕೂ ಹೆಚ್ಚು ರನ್ ಗಳಿಸಿದ ಯಾರೂ ಕೊಹ್ಲಿಗಿಂತ ಹೆಚ್ಚಿನ ಸರಾಸರಿಯನ್ನು ಹೊಂದಿಲ್ಲ. ಅಲ್ಲದೆ, ಸ್ಟ್ರೈಕ್ ರೇಟ್ ವಿಭಾಗದಲ್ಲಿಯೂ, 2000ಕ್ಕೂ ಹೆಚ್ಚು ರನ್ ಗಳಿಸಿದ 21 ಬ್ಯಾಟ್ಸ್‌ಮನ್‌ಗಳ ಪೈಕಿ ಕೇವಲ ನಾಲ್ವರು ಮಾತ್ರ ಕೊಹ್ಲಿಗಿಂತ ಉತ್ತಮ ಸ್ಟ್ರೈಕ್ ರೇಟ್ ಹೊಂದಿದ್ದಾರೆ.

ಐಪಿಎಲ್ 2025ರ ಈ ಆವೃತ್ತಿಯಲ್ಲಿ ತಮ್ಮ 5ನೇ ಅರ್ಧಶತಕ ಸಿಡಿಸುವ ಮೂಲಕ ಮತ್ತೊಂದು ದಾಖಲೆ ಬರೆದಿದ್ದಾರೆ. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದು ಅವರ 26ನೇ ಅರ್ಧಶತಕವಾಗಿತ್ತು.

ಮತ್ತೊಂದು ದಾಖಲೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಪಾಕಿಸ್ತಾನದ ಬ್ಯಾಟ್ಸ್‌ಮನ್ ಬಾಬರ್ ಅಜಮ್ ಅವರನ್ನು ಹಿಂದಿಕ್ಕಿದ್ದಾರೆ. T20 ಕ್ರಿಕೆಟ್‌ನಲ್ಲಿ ಮೊದಲು ಬ್ಯಾಟ್ ಮಾಡಿ ಅತಿ ಹೆಚ್ಚು ಅರ್ಧಶತಕಗಳನ್ನು ಗಳಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶುಕ್ರವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ (RR) ವಿರುದ್ಧದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ವಿಶಿಷ್ಟ ಸಾಧನೆ ಮಾಡಿದ್ದಾರೆ.

ಪಂದ್ಯದ ಸಮಯದಲ್ಲಿ, ವಿರಾಟ್ 42 ಎಸೆತಗಳಲ್ಲಿ ಎಂಟು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳೊಂದಿಗೆ 70 ರನ್ ಗಳಿಸಿದರು. ಈ ಆವೃತ್ತಿಯಲ್ಲಿ ನಾಲ್ಕು ಇನಿಂಗ್ಸ್‌ಗಳಲ್ಲಿ ತಮ್ಮ ಮೊದಲ ಅರ್ಧಶತಕ ಬಾರಿಸಿದರು. ತವರಿನಲ್ಲಿ ನಡೆದಿದ್ದ ಹಿಂದಿನ ಮೂರು ಇನಿಂಗ್ಸ್‌ಗಳಲ್ಲಿ ಕೇವಲ 30 ರನ್‌ಗಳನ್ನು ಗಳಿಸಿದ್ದರು. ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಗಳಿಸಿದ 62ನೇ ಅರ್ಧಶತಕ ಇದಾಗಿದ್ದು, 61 ಅರ್ಧಶತಕ ಗಳಿಸಿದ್ದ ಬಾಬರ್ ಅವರನ್ನು ಹಿಂದಿಕ್ಕಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com