ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

IPL 2025: RCB ಪ್ಲೇಆಫ್ ತಲುಪಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು? ಹೇಗಿದೆ ಮುಂದಿನ ಹಾದಿ?

ಭಾನುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡವು 54 ರನ್‌ಗಳ ಭರ್ಜರಿ ಜಯ ಸಾಧಿಸಿದ್ದರೆ, ಮತ್ತೊಂದೆಡೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ್ದು, ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನಕ್ಕೇರಿದೆ.
Published on

ಐಪಿಎಲ್ 2025ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಇನ್ನೇನು ಮುಗಿಯುವ ಹಂತಕ್ಕೆ ಬಂದಿದ್ದು, ಭಾನುವಾರ ನಡೆದ ಎರಡು ಪಂದ್ಯಗಳು ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣವಾಗಿತ್ತು. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡವು ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ 54 ರನ್‌ಗಳ ಭರ್ಜರಿ ಜಯ ಸಾಧಿಸಿದ್ದು, ಇದು ಮುಂಬೈನ ಸತತ ಐದನೇ ಗೆಲುವಾಗಿದೆ. ಈ ಮೂಲಕ 12 ಅಂಕಗಳೊಂದಿಗೆ ಮುಂಬೈ ತಂಡವು ಮೂರನೇ ಸ್ಥಾನಕ್ಕೇರಿದೆ. ಎರಡನೇ ಪಂದ್ಯದಲ್ಲಿ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ್ದು, ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನಕ್ಕೇರಿದೆ.

ಈ ಫಲಿತಾಂಶಗಳೊಂದಿಗೆ, ಐಪಿಎಲ್ ಪ್ಲೇಆಫ್‌ ಸ್ಪರ್ಧೆಯು ಹೆಚ್ಚು ಕುತೂಹಲಕಾರಿಯಾಗಿದೆ. ಇದು ಅಂಕಪಟ್ಟಿಯ ಐದನೇ ಸ್ಥಾನದಿಂದ ಕೆಳಗಿರುವ ತಂಡಗಳಿಗೆ ಕಠಿಣ ಪರಿಸ್ಥಿತಿಯಾಗಿ ಪರಿಣಮಿಸಿದೆ. ಇದೀಗ ಪ್ಲೇಆಫ್ ತಲುಪಲು ಯಾವ ತಂಡಗಳು ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎನ್ನುವುದರ ಕುರಿತು ತಿಳಿಯೋಣ...

1. ರಾಯಲ್ ಚಾಲೆಂಜರ್ಸ್ ಬೆಂಗಳೂರು

ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧದ ಗೆಲುವಿನ ನಂತರ, ಆರ್‌ಸಿಬಿ ಆಡಿರುವ 10 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿದ್ದು, 14 ಅಂಕಗಳೊಂದಿಗೆ ಪಾಯಿಂಟ್ ಟೇಬಲ್ಸ್‌ನಲ್ಲಿ ಅಗ್ರಸ್ಥಾನಕ್ಕೆ ಏರಿದೆ. ಲೀಗ್ ಹಂತದಲ್ಲಿ ಆಡಬೇಕಿರುವ ಉಳಿದ ನಾಲ್ಕು ಪಂದ್ಯಗಳಲ್ಲಿ, ಎರಡರಲ್ಲಿ ಗೆಲುವು ಸಾಧಿಸಿದರೆ ಆರ್‌ಸಿಬಿ ಪ್ಲೇಆಫ್‌ಗೆ ಅರ್ಹತೆ ಪಡೆಯಲಿದೆ. ಮೂರು ಅಥವಾ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಅಗ್ರ ಎರಡು ಸ್ಥಾನಗಳು ಸಿಗಲಿದೆ.

2. ಗುಜರಾತ್ ಟೈಟಾನ್ಸ್

ಆಡಿರುವ 8 ಪಂದ್ಯಗಳಲ್ಲಿ 6ರಲ್ಲಿ ಜಯ ಸಾಧಿಸಿದ್ದು 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಪ್ಲೇಆಫ್ ತಲುಪಲು ಮೂರು ಪಂದ್ಯಗಳನ್ನು ಮಾತ್ರ ಗೆಲ್ಲಬೇಕಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ
IPL 2025: ಚಿನ್ನಸ್ವಾಮಿಯಲ್ಲಿ RR ವಿರುದ್ಧ ಜಯ; RCB ಪ್ಲೇಆಫ್ ಹಾದಿ ಮತ್ತಷ್ಟು ಸುಗಮ!

3. ಮುಂಬೈ ಇಂಡಿಯನ್ಸ್

ಐದು ಬಾರಿಯ ಚಾಂಪಿಯನ್ ತಂಡವು ಈ ಆವೃತ್ತಿಯಲ್ಲಿ ಆರಂಭದಲ್ಲಿ ಸೋಲು ಕಂಡು ಸಂಕಷ್ಟಕ್ಕೆ ಸಿಲುಕಿತ್ತು. ಬಳಿಕ ಸತತ ಐದು ಪಂದ್ಯಗಳನ್ನು ಗೆದ್ದು, 12 ಅಂಕಗಳನ್ನು ಗಳಿಸಿದೆ. ಈಗ ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸಬೇಕಿದೆ. ಎರಡು ಪಂದ್ಯಗಳಲ್ಲಿ ಗೆದ್ದರೂ ಪ್ಲೇಆಫ್‌ಗೆ ಪ್ರವೇಶಿಸಬಹುದು.

4. ಡೆಲ್ಲಿ ಕ್ಯಾಪಿಟಲ್ಸ್

ಈಗ ನಡೆಯುತ್ತಿರುವ ಆವೃತ್ತಿಯಲ್ಲಿ ಡಿಸಿ ಬಲಿಷ್ಠ ತಂಡಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಆಡಿರುವ 9 ಪಂದ್ಯಗಳಲ್ಲಿ 12 ಅಂಕಗಳೊಂದಿಗೆ, ಅಕ್ಷರ್ ಪಟೇಲ್ ನೇತೃತ್ವದ ತಂಡವು ಆಡಬೇಕಿರುವ 5 ರಲ್ಲಿ ನಾಲ್ಕು ಪಂದ್ಯಗಳಲ್ಲಿ ಗೆಲ್ಲುವ ಅಗತ್ಯವಿದೆ. ಮೂರು ಪಂದ್ಯಗಳನ್ನು ಗೆದ್ದರೂ, ಅವರ ಪ್ಲೇಆಫ್ ಅವಕಾಶಗಳು ಬಹುತೇಕ ದೃಢವಾಗುತ್ತವೆ.

5. ಪಂಜಾಬ್ ಕಿಂಗ್ಸ್

ಆಡಿರುವ ಒಂಬತ್ತು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಸಾಧಿಸಿದ್ದು, ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಪಿಬಿಕೆಎಸ್ ಪ್ಲೇಆಫ್ ಸ್ಥಾನವನ್ನು ಪಡೆಯಲು ಐದು ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಗೆಲ್ಲಬೇಕು. ಮೂರು ಪಂದ್ಯಗಳನ್ನು ಗೆದ್ದರೂ, ಅರ್ಹತೆ ಪಡೆಯುವ ಅವಕಾಶವಿದೆ.

6. ಲಕ್ನೋ ಸೂಪರ್ ಜೈಂಟ್ಸ್

ಎಲ್‌ಎಸ್‌ಜಿ ಸದ್ಯ 10 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿದ್ದು, 10 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದೆ. ಪ್ಲೇಆಫ್‌ಗೆ ಹೋಗುವ ಓಟದಲ್ಲಿ ಜೀವಂತವಾಗಿರಲು ಅವರು ನಾಲ್ಕು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ
IPL 2025: ಆರ್‌ಸಿಬಿ, ಸಿಎಸ್‌ಕೆ ಈ ಬಾರಿ ಪ್ಲೇಆಫ್ ತಲುಪೋದು ಡೌಟು; ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್

7. ಕೋಲ್ಕತ್ತಾ ನೈಟ್ ರೈಡರ್ಸ್

ಹಾಲಿ ಚಾಂಪಿಯನ್ಸ್ ಕೆಕೆಆರ್ ತಂಡವು ಸದ್ಯ ಆಡಿರುವ ಒಂಬತ್ತು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು ಸಾಧಿಸಿದೆ. ಪ್ಲೇಆಫ್ ತಲುಪಲು ಉಳಿದ ಐದು ಪಂದ್ಯಗಳನ್ನು ಗೆಲ್ಲುವ ಅನಿವಾರ್ಯತೆ ಇದೆ.

8. ಸನ್‌ರೈಸರ್ಸ್ ಹೈದರಾಬಾದ್

ಕೆಕೆಆರ್‌ನಂತೆಯೇ, ಎಸ್‌ಆರ್‌ಹೆಚ್ ಕೂಡ ಒಂಬತ್ತು ಪಂದ್ಯಗಳಲ್ಲಿ ಕೇವಲ ಮೂರು ಗೆಲುವು ಸಾಧಿಸಿದೆ. ಪ್ಲೇಆಫ್‌ಗೆ ಅರ್ಹತೆ ಪಡೆಯಲು ಉಳಿದಿರುವ ಐದು ಪಂದ್ಯಗಳನ್ನು ಗೆಲ್ಲಬೇಕಿದೆ.

9. ರಾಜಸ್ಥಾನ್ ರಾಯಲ್ಸ್

ಆಡಿರುವ ಒಂಬತ್ತು ಪಂದ್ಯಗಳಲ್ಲಿ ಏಳರಲ್ಲಿ ಸೋಲು ಕಂಡ ನಂತರ, ಆರ್‌ಆರ್ ಪ್ಲೇಆಫ್ ರೇಸ್‌ನಿಂದ ಹೊರಗುಳಿದಿದೆ. ಆದಾಗ್ಯೂ, ಉಳಿದ ಐದು ಪಂದ್ಯಗಳನ್ನು ಭಾರಿ ಅಂತರದಿಂದ ಗೆದ್ದರೆ ಮತ್ತು ಇತರ ತಂಡಗಳ ಫಲಿತಾಂಶಗಳು ಸಹ ಪ್ಲೇಆಫ್ ತಲುಪಲು ನೆರವಾಗಬೇಕಿದೆ.

10. ಚೆನ್ನೈ ಸೂಪರ್ ಕಿಂಗ್ಸ್

ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಒಂಬತ್ತು ಪಂದ್ಯಗಳಲ್ಲಿ ಎರಡರಲ್ಲಿ ಮಾತ್ರ ಗೆಲುವು ಕಂಡಿದೆ. RR ನಂತೆಯೇ, ಪ್ಲೇಆಫ್ ತಲುಪಲು ಅವರು ತಮ್ಮ ಉಳಿದ ಪಂದ್ಯಗಳನ್ನು ಭಾರಿ ಅಂತರದಿಂದ ಗೆಲ್ಲಬೇಕಿದೆ ಮತ್ತು ಇತರ ತಂಡಗಳ ಫಲಿತಾಂಶಗಳನ್ನು ಆಶ್ರಯಿಸಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com