ಅಚ್ಚರಿಯಾದ್ರೂ ಸತ್ಯ.. ವಾಂಖೆಡೆಯಲ್ಲಿ Lionel Messi vs Virat Kohli-MS Dhoni ಪಂದ್ಯ..!

ಅರ್ಜೆಂಟೀನಾ ಫುಟ್ಬಾಲ್ ಸೂಪರ್ ಸ್ಟಾರ್ ಲಿಯೋನಲ್ ಮೆಸ್ಸಿ 14 ವರ್ಷಗಳ ನಂತರ ಭಾರತಕ್ಕೆ ಬರುತ್ತಿದ್ದು, ಡಿಸೆಂಬರ್ 13 ರಿಂದ 15 ರವರೆಗೆ ಭಾರತ ಪ್ರವಾಸದಲ್ಲಿರುವ ಮೆಸ್ಸಿ ಒಟ್ಟು ಮೂರು ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.
Lionel Messi vs Virat Kohli And MS Dhoni
ಮೆಸ್ಸಿ ಮತ್ತು ಕೊಹ್ಲಿ-ಧೋನಿ
Updated on

ಮುಂಬೈ: ಅರ್ಜೆಂಟೀನಾದ ಫುಟ್ಬಾಲ್ ಲೆಜೆಂಡ್, ಫುಟ್ಬಾಲ್ ಸೂಪರ್ ಸ್ಟಾರ್ ಲಿಯೋನೆಲ್ ಮೆಸ್ಸಿ (Lionel Messi) ಭಾರತಕ್ಕೆ ಆಗಮಿಸುತ್ತಿದ್ದು, ಮಾತ್ರವಲ್ಲದೇ ಇಲ್ಲೊಂದು ಪಂದ್ಯವನ್ನೂ ಕೂಡ ಆಡುತ್ತಿದ್ದಾರೆ.

ಅಚ್ಚರಿಯಾದರೂ ಇದು ಸತ್ಯ.. ಅರ್ಜೆಂಟೀನಾ ಫುಟ್ಬಾಲ್ ಸೂಪರ್ ಸ್ಟಾರ್ ಲಿಯೋನಲ್ ಮೆಸ್ಸಿ 14 ವರ್ಷಗಳ ನಂತರ ಭಾರತಕ್ಕೆ ಬರುತ್ತಿದ್ದು, ಮುಂಬರುವ ಡಿಸೆಂಬರ್ 13 ರಿಂದ 15 ರವರೆಗೆ ಭಾರತ ಪ್ರವಾಸದಲ್ಲಿರುವ ಮೆಸ್ಸಿ ಒಟ್ಟು ಮೂರು ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಮೆಸ್ಸಿ ಭಾರತದಲ್ಲಿ ಒಂದು ಪಂದ್ಯವನ್ನೂ ಕೂಡ ಆಡಲಿದ್ದಾರೆ. ಈ ವಿಶೇಷ ಪಂದ್ಯದಲ್ಲಿ ಭಾರತದ ಕ್ರಿಕೆಟ್ ದಿಗ್ಗಜ ಆಟಗಾರರು ಪಾಲ್ಗೊಳ್ಳುತ್ತಿದ್ದಾರೆ.

ಲಿಯೋನೆಲ್ ಮೆಸ್ಸಿ ಈ ಹಿಂದೆ 2011 ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. ಆ ಸಮಯದಲ್ಲಿ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ವೆನೆಜುವೆಲಾ ವಿರುದ್ಧ ಸೌಹಾರ್ದ ಪಂದ್ಯವನ್ನು ಆಡಿದ್ದರು. ಈಗ 14 ವರ್ಷಗಳ ನಂತರ ಅವರು ಮತ್ತೊಮ್ಮೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.

Lionel Messi vs Virat Kohli And MS Dhoni
IND vs ENG 5th test: ಅಂತಿಮ ಟೆಸ್ಟ್ ಪಂದ್ಯದಿಂದ ಕ್ರಿಸ್ ವೋಕ್ಸ್ ಔಟ್; ಇಂಗ್ಲೆಂಡ್‌ಗೆ ದೊಡ್ಡ ಹಿನ್ನಡೆ

ಕ್ರಿಕೆಟ್ ಆಡುವ ಮೆಸ್ಸಿ

ಭಾರತದದ ದಿಗ್ಗಜ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್ (Sachin Tendulkar), ವಿರಾಟ್ ಕೊಹ್ಲಿ (Virat Kohli), ಮಹೇಂದ್ರ ಸಿಂಗ್ (Mahendra Singh Dhoni) ಮತ್ತು ರೋಹಿತ್ ಶರ್ಮಾ (Rohit Sharma) ಸೇರಿದಂತೆ ಹಲವು ದಿಗ್ಗಜ ಆಟಗಾರರು ಪಾಲ್ಗೊಳ್ಳುತ್ತಿದ್ದಾರೆ.

ಅಚ್ಚರಿ ಎಂದರೆ ಈ ಎಲ್ಲ ಆಟಗಾರರು ಮೆಸ್ಸಿಯೊಂದಿಗೆ ಒಂದು ಪಂದ್ಯವನ್ನಾಡುತ್ತಿದ್ದು, ಅದು ಫುಟ್ಬಾಲ್ ಪಂದ್ಯವಲ್ಲ.. ಮೆಸ್ಸಿ ಭಾರತದ ಕ್ರಿಕೆಟ್ ದಿಗ್ಗಜರೊಂದಿಗೆ ಕ್ರಿಕೆಟ್ ಪಂದ್ಯವನ್ನಾಡಲಿದ್ದಾರೆ. ಈ ವಿಶೇಷ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ವರದಿಯಾಗಿದೆ.

ಮೆಸ್ಸಿ 3 ದಿನಗಳ ಕಾಲ ಭಾರತದಲ್ಲಿ ಉಳಿಯಲಿದ್ದು ವರದಿಗಳ ಪ್ರಕಾರ, ಲಿಯೋನೆಲ್ ಮೆಸ್ಸಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ 7 ಆಟಗಾರರ ಕ್ರಿಕೆಟ್ ಪಂದ್ಯವನ್ನು ಆಡಲಿದ್ದಾರೆ.

ಇದಲ್ಲದೆ ಡಿಸೆಂಬರ್ 13 ರಿಂದ 15 ರವರೆಗೆ ಅವರು ಕೋಲ್ಕತ್ತಾ, ದೆಹಲಿ ಮತ್ತು ಮುಂಬೈಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಡಿಸೆಂಬರ್ 14 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಮೆಸ್ಸಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಕೋಲ್ಕತ್ತಾದಲ್ಲಿ ಸನ್ಮಾನ

ಬಳಿಕ ಮೆಸ್ಸಿ ಕೋಲ್ಕತ್ತಾಗೆ ಭೇಟಿ ನೀಡಲಿದ್ದು, ಅಲ್ಲಿ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಅವರನ್ನು ಸನ್ಮಾನಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮದ ಬಳಿಕ ಕೋಲ್ಕತ್ತಾ ಭೇಟಿಯ ಸಮಯದಲ್ಲಿ, ಮೆಸ್ಸಿ ಮಕ್ಕಳಿಗಾಗಿ ಫುಟ್ಬಾಲ್ ಕಾರ್ಯಾಗಾರವನ್ನು ಆಯೋಜಿಸಲಿದ್ದಾರೆ. ಇದೇ ವೇಳೆ ಮೆಸ್ಸಿ ಗೌರವಾರ್ಥವಾಗಿ ‘ಗೋಟ್ ಕಪ್’ ಪಂದ್ಯಾವಳಿಯನ್ನು ಸಹ ಆಯೋಜಿಸಲಾಗುವುದು ಎಂದು ಆಯೋಜಕರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com